ಯಾದಗಿರಿ: ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿ ಡಾ.ಜ್ಯೋತಿ ಪಾಟೀಲ ತುನ್ನೂರು ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ 2023ರಲ್ಲಿ ಮಂಡನೆಯಾಗಿದ್ದರೂ ಮಿಸಲಾತಿ ಜಾರಿ ಮಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಹಿಂದೇಟು ಹಾಕಿದೆ ಏಕೆ ಎಂಬುದು ಮೋದಿ ಅವರು ಉತ್ತರ ಕೊಡಬೇಕು. ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಸಬಲೀಕರಣಕ್ಕಿಂತ ಚನಾವಣೆ ಗೆಲ್ಲುವುದು ಅತ್ಯಂತ ಮುಖ್ಯವಾಗಿದೆ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.

ಮಹಿಳೆಯರ ಮೇಲೆ ಕಾಳಜಿಯಿಲ್ಲದೆ ಸ್ವ ಹಿತಾಸಕ್ತಿಗಾಗಿ ಮಹಿಳಾ ಮೀಸಲು ಕಾಯ್ದೆಯನ್ನು ಬಿಜೆಪಿ ಜಾರಿ ಮಾಡುತ್ತಿಲ್ಲ. ಬಿಜೆಪಿ ಸರ್ಕಾರವು ಲೋಕಸಭಾ ಕ್ಷೇತ್ರಗಳ ಮರುವಿಂಗಡನೆ ಮಸೂದೆಯನ್ನು ಮಂಡಿಸಲು ಮಹಿಳೆಯರ ಮೀಸಲಾತಿ ಕಾಯ್ದೆ ಮಂಡಿಸಿತು. ಮಹಿಳಾ ಮೀಸಲಾತಿಯನ್ನು ವಿರೋಧಿಸುವ ಸಲುವಾಗಿ ಕ್ಷೇತ್ರ ಮರುವಿಂಗಡಣೆ ಮಸೂದೆ ನೆಪದಲ್ಲಿ ಮಹಿಳಾ ಮೀಸಲಾತಿಯನ್ನು ಮುನ್ನಲೆಗೆ ತಂದಿತ್ತು. ಇದೊಂದು ಬಿಜೆಪಿಗರ ರಾಜಕೀಯ ಕುತಂತ್ರದ ಭಾಗವಾಗಿದೆ ಎಂದು ಟೀಕಿಸಿದ್ದಾರೆ.

‘ಕಾಂಗ್ರೆಸ್ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ’ ಎನ್ನುವ ಪ್ರಧಾನಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸತ್ತೇನೆ. ಮಹಿಳಾ ಮೀಸಲಾತಿ ಬಿಲ್ ಹಾಗೂ ಕ್ಷೇತ್ರ ಮರುವಿಂಗಡಣೆ ಎರಡೂ ಬೇರೆ ಬೇರೆ. ಆದರೆ, ಬಿಜೆಪಿಯವರು ಅದನ್ನು ಬೇರೆ ರೀತಿ ಬಿಂಬಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಮರುವಿಂಗಡಣೆ ಮಸೂದಿಗೆ ವ್ಯತ್ಯಾಸವಿದೆ ಎಂದಿದ್ದಾರೆ.

ಮೋದಿ ಅವರು 2023ರಲ್ಲಿ ನಾರಿ ಶಕ್ತಿ ಬಿಲ್ ಮಂಡನೆ ಮಾಡಿದ್ದರು. ಇದಕ್ಕೆ ಎಲ್ಲಾ ಪಕ್ಷದ ನಾಯಕರು ಸಹಮತ ವ್ಯಕ್ತಪಡಿಸಿದ್ರು. 40 ತಿಂಗಳಾದರೂ ಇದನ್ನ ಯಾಕೆ ಮುಂಚೂಣಿಗೆ ತಂದಿರಲಿಲ್ಲ? ಅಧಿಸೂಚನೆಯೂ ಏಕೆ ಹೊರಡಿಸರಲಿಲ್ಲ? ಮೋದಿ ಅವರು ರಾಜಕೀಯ ದಾಳ ಉರುಳಿಸುತ್ತಿದ್ದಾರೆ ಹೊರತು ಮಹಿಳಾ ಮೀಸಲಾತಿ ಬಿಲ್ ಅನುಷ್ಠಾನ ಬೇಕಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಮಹಿಳಾ ಮೀಸಲಾತಿ ಪರವಾಗಿದೆ ಇದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-30-1324306703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.