ಯಾದಗಿರಿ: ಯಾದಗಿರಿ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಯಿಮ್ಸ್) ಜಿಲ್ಲಾ ಆಸ್ಪತ್ರೆಯಲ್ಲಿ ವಿಪತ್ತು ಸನ್ನದ್ಧತೆ ಕುರಿತು ಸಮಗ್ರ ಅಣಕು ಪ್ರದರ್ಶನ ನಡೆಯಿಯಿತು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಜಿಲ್ಲಾ ಗೃಹರಕ್ಷಕ ದಳ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಅಣಕು ಪ್ರದರ್ಶನದಲ್ಲಿ ಆಸ್ಪತ್ರೆ ಪರಿಸರದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ, ಕಟ್ಟಡ ದುರಂತ, ಭೂಕಂಪ, ವಿದ್ಯುತ್ ಅವಘಡ ಹಾಗೂ ಇತರೆ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತ್ವರಿತವಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಪ್ರಾಯೋಗಿಕ ಅರಿವು ಮೂಡಿಸಲಾಯಿತು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಅಗ್ನಿ ನಿಯಂತ್ರಣ ಕ್ರಮಗಳು, ಅಗ್ನಿಶಾಮಕ ಉಪಕರಣಗಳ ಸಮರ್ಪಕ ಬಳಕೆ, ಹೊಗೆ ತುಂಬಿದ ಪ್ರದೇಶಗಳಲ್ಲಿ ಸುರಕ್ಷಿತವಾಗಿ ಕಾರ್ಯನಿರ್ವಹಿಸುವ ವಿಧಾನಗಳು ಹಾಗೂ ತುರ್ತು ನಿರ್ಗಮನ ಮಾರ್ಗಗಳ ಬಳಕೆಯ ಕುರಿತು ಪ್ರಾಯೋಗಿಕ ಪ್ರದರ್ಶನ ನೀಡಿ ಗಮನ ಸೆಳೆಯಲಾಯಿತು.

ಆಸ್ಪತ್ರೆಯ ವಿವಿಧ ವಾರ್ಡ್ಗಳಿಂದ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕ್ರಮಗಳು, ತುರ್ತು ವಾಹನಗಳ ಸಂಚಾರ ವ್ಯವಸ್ಥೆ ಹಾಗೂ ಆಂಬ್ಯುಲೆನ್ಸ್ ಸಮನ್ವಯದ ಕಾರ್ಯಪದ್ಧತಿಯನ್ನು ಕೂಡ ಪ್ರದರ್ಶಿಸಲಾಯಿತು. ಆರೋಗ್ಯ ತುರ್ತು ಆರೋಗ್ಯ ಸೇವೆಗಳ ನಿರ್ವಹಣೆಯ ಕುರಿತು ಮಾಹಿತಿಯನ್ನು ನೀಡಿದರು.

ಜಿಲ್ಲಾ ಗೃಹರಕ್ಷಕ ದಳದ ಸಿಬ್ಬಂದಿ ಜನಸಂದಣಿ ನಿಯಂತ್ರಣ, ಸುರಕ್ಷಿತ ನಿರ್ಗಮನ ವ್ಯವಸ್ಥೆ, ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಶಾಂತಿ ಮತ್ತು ಶಿಸ್ತು ಕಾಪಾಡುವ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆ ನಡೆಸಿದರು.

ಅಣಕು ಪ್ರದರ್ಶನವು ಕೇವಲ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಅಭ್ಯಾಸವಾಗಿರದೇ, ಸಾರ್ವಜನಿಕರಲ್ಲಿ ವಿಪತ್ತು ಸನ್ನದ್ಧತೆ, ಜಾಗೃತಿ ಹಾಗೂ ಆತ್ಮಸ್ಥೈರ್ಯವನ್ನು ವೃದ್ಧಿಸುವ ಮಹತ್ವದ ಕಾರ್ಯಕ್ರಮವಾಗಿ ಪರಿಣಮಿಸಿತು.

ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯರು, ಆರೋಗ್ಯ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.