ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಮಾಸ್ಕ್ ಹಾಕದವರಿಂದ ₹1 ಕೋಟಿ ದಂಡ ವಸೂಲಿ

ಕೋವಿಡ್-19 ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮಾಹಿತಿ
Last Updated 17 ಜನವರಿ 2022, 16:40 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಸುತ್ತಾಟ ನಡೆಸಿದವರಿಗೆ ದಂಡ ವಿಧಿಸಲಾಗಿದ್ದು,ಇಲ್ಲಿಯವರೆಗೆ ₹1.8 ಕೋಟಿ ದಂಡ ವಿಧಿಸಲಾಗಿದೆ. 1.04 ಲಕ್ಷ ಜನರಿಗೆ ದಂಡ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್-19 ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಾರ್ಯಾಲಯ ನಗರಾಭಿವೃದ್ಧಿ ಕೋಶ ಇಲಾಖೆ ವತಿಯಿಂದ ಯಾದಗಿರಿ, ಶಹಾಪುರ, ಸುರಪುರ ನಗರಸಭೆ ಮತ್ತು ಗುರುಮಠಕಲ್, ಕೆಂಭಾವಿ, ಕಕ್ಕೇರಾ ಪುರಸಭೆ ಹಾಗೂ ಹುಣಸಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2022ರ ಜನವರಿ 15ರಂದು 118 ಜನರಿಂದ ₹11,800,ಜನವರಿ 16 ರಂದು 122 ಜನರಿಂದ ₹12,200 ದಂಡ ಪಡೆಯಲಾಗಿದೆ. ಒಟ್ಟಾರೆ ಇಲ್ಲಿಯವರೆಗೆ 42,734 ಜನರಿಗೆ ದಂಡ ವಿಧಿಸಿದ್ದು, ₹45,31,946 ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ವತಿಯಿಂದ ಇಲ್ಲಿಯವರೆಗೆ 55,844 ಜನರಿಗೆ ದಂಡ ವಿಧಿಸಿದ್ದು, ಒಟ್ಟು ₹57,26,873 ವಸೂಲಾಗಿದೆ ಎಂದರು.

ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಇಲ್ಲಿಯವರೆಗೆ 5,792 ಜನರಿಗೆ ದಂಡ ವಿಧಿಸಿದ್ದು, ₹5,79,200 ವಸೂಲಿಯಾಗಿದೆ. ಹೀಗಾಗಿ ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳನ್ನು ಉಲ್ಲಂಘನೆಯಾಗದಂತೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

ಜಿಲ್ಲೆಯ ಗಡಿ ಭಾಗದಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ರ‍್ಯಾಟ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸೋಂಕು ದೃಢಪಡುವ ಜನರ ಜತೆ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಮೂಲಕ ಸೋಂಕು ಮತ್ತಷ್ಟು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೋವಿಡ್-19 ಪರೀಕ್ಷೆಯನ್ನು ತೀವ್ರಗೊಳಿಸಬೇಕು. ಚಿಕಿತ್ಸೆಯು ಅಚ್ಚುಕಟ್ಟಾಗಿ ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಕೋವಿಡ್ ಸೋಂಕಿತ ರೋಗಿಗಳಿಗೆ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಅವಶ್ಯಕ ಔಷಧಿಗಳ ಮತ್ತು ಉಪಕರಣಗಳು ದೊರೆಯುವಂತೆ ಕ್ರಮ ವಹಿಸಿ ಎಂದರು.

ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 907 ಆಮ್ಲಜನಕ ಬೆಡ್‌ಗಳು ಸಿದ್ಧತೆಯಲ್ಲಿ ಇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಎಲ್ಲಾ ಹಾಸಿಗೆಗಳಿಗೆ ಸಮರ್ಪಕವಾಗಿ ಆಮ್ಲಜನಕ ಪೂರೈಕೆಯಾಗುತ್ತಿರುವ ಬಗ್ಗೆ ದೃಢೀಕರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಶೋಕ ತೋಟದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT