ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | 4 ಜನರಿಗೆ ಕೋವಿಡ್‌ ದೃಢ; ಒಟ್ಟು ಸೋಂಕಿತರ ಸಂಖ್ಯೆ 877ಕ್ಕೆ ಏರಿಕೆ

Last Updated 19 ಜೂನ್ 2020, 16:34 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ 4 ಜನರಿಗೆ ಕೋವಿಡ್‌–19 ದೃಢಪಟ್ಟಿದ್ದು,ಇದರಿಂದ ಪ್ರಕರಣಗಳ877ಕ್ಕೆ ಏರಿಕೆಯಾಗಿದೆ.

ಯಾದಗಿರಿ ತಾಲ್ಲೂಕಿನ ಲಿಂಗೇರಿಯ 78 ವರ್ಷದ ಮಹಿಳೆ, ಅಲ್ಲಿಪುರ ಗ್ರಾಮದ 32 ವರ್ಷದ ಮಹಿಳೆ, ಸುರಪುರ ತಾಲ್ಲೂಕಿನ ದಿವಳಗುಡ್ಡದ 27 ವರ್ಷದ ಮಹಿಳೆ, 31 ವರ್ಷದ ಪುರುಷನಿಗೆ ಸೋಂಕು ತಗುಲಿದೆ.

ಇವರಿಗೆಸೋಂಕು ಎಲ್ಲಿಂದ ಬಂತುತಿಳಿಯದಾಗಿದೆ. ಇದರಿಂದ ಸಮುದಾಯಕ್ಕೆ ಸೋಂಕು ಹರಡಿದೆಯಾ ಎನ್ನುವ ಅನುಮಾನ ಸಾರ್ವಜನಿಕರಲ್ಲಿ ಉಂಟಾಗಿದೆ. ಇವರೆಲ್ಲರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,757 ವರದಿ ಬಾಕಿ: ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಶುಕ್ರವಾರ 100 ನೆಗೆಟಿವ್ ವರದಿ ಸೇರಿ ಈವರೆಗೆ 20,402 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 835 ಮಾದರಿಗಳು ಸೇರಿದಂತೆ 1,757 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ತಿಳಿಸಿದ್ದಾರೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,368 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,771 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 67 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 171 ಜನ, ಶಹಾಪುರ, ಸುರಪುರ, ಏಕಲವ್ಯ ಕೊರೊನಾ ಕೇರ್ ಸೆಂಟರ್‌ನಲ್ಲಿ174 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ.ಜಿಲ್ಲೆಯ 20 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ 666 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT