ಯಾದಗಿರಿ: ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಮುದ್ನಾಳ ಅಭಿಮಾನಿಗಳು ನಗರದ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಯಾದಗಿರಿ ಮತಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಪಕ್ಷದಿಂದ ಆಯ್ಕೆಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆ ಮೂಲಕ ಬಿಜೆಪಿಗೆ ಗೆಲವು ತಂದು ಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಭಿಮಾನಿಗಳು ಆಗ್ರಹಿಸಿದರು.

ಇದನ್ನೂ ಓದಿ: ವರಿಷ್ಠರ ಸಭೆಯಲ್ಲಿ ಸಂಪುಟ ವಿಸ್ತರಣೆ ನಿರ್ಧಾರ: ಬೊಮ್ಮಾಯಿ

ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ಸದಸ್ಯರಾದ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಮುಖಂಡರಾದ ಸುರೇಶ ರಾಠೋಡ್, ರಮೇಶ ದೊಡಮನಿ, ವೀಣಾ ಮೋದಿ, ಮಾರುತಿ ಕಲಾಲ್, ಶಂಕರ್ ಸೋನಾರ್, ಸುನೀತಾ ಚವಾಣ್, ಎಸ್.ಪಿ. ನಾಡೇಕರ್, ರವಿ ಮುದ್ನಾಳ, ಶರಣಗೌಡ ಕಾಳೆಬೆಳಗುಂದಿ, ಶಿವಕಾಂತಮ್ಮ ವಡ್ನಳ್ಳಿ, ಮರೆಪ್ಪ ನಾಟೇಕರ್, ಭೀಮು ಪೂಜಾರಿ ಸೇರಿದಂತೆ ಅಭಿಮಾನಿಗಳ ಬಳಗದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.