ಯಾದಗಿರಿ ತಾಲ್ಲೂಕಿನ ಗ್ರಾಮವೊಂದರ ಜಮೀನಿಗೆ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರ ಭೇಟಿ ನೀಡಿದರು
ಮಲ್ಲನಗೌಡ ಹಗರಟಗಿ
10 ದಿನಗಳಲ್ಲಿ ಬೆಳೆ ಹಾನಿಯ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಸಮೀಕ್ಷೆ ಮುಗಿದ ಬಳಿಕ ಹಾನಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು
ರತೇಂದ್ರನಾಥ ಸೂಗುರ ಜಂಟಿ ಕೃಷಿ ನಿರ್ದೇಶಕ
ಬೆಳೆಹಾನಿ :
₹ 50 ಸಾವಿರ ಪರಿಹಾರ ನೀಡಿ’ ‘ಸತತ ಮಳೆಯಿಂದ ಹತ್ತಿ ತೊಗರಿ ಹೆಸರು ಬೆಳೆಗಳಿಗೆ ಹಾನಿಯಾಗಿದೆ. ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹ 50 ಸಾವಿರ ಪರಿಹಾರ ನೀಡಬೇಕು’ ಎಂದು ರಾಜ್ಯ ರೈತ ಸಂಘ ಹಸಿರು ಸೇನೆ (ವಾಸುದೇವ ಮೇಟಿ ಬಣ) ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಹಗರಟಗಿ ಮನವಿ ಮಾಡಿದ್ದಾರೆ. ಈಗಾಗಲೇ ಹಲವು ಬೆಳೆಗಳನ್ನು ಕಳೆದುಕೊಂಡ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಮಾಡಿ ಬೆಳೆಗಳನ್ನು ಬೆಳೆದಿದ್ದರು. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಅಧಿಕಾರಿಗಳು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸರಿಯಾಗಿ ಪರಿಶೀಲನೆ ನಡೆಸಬೇಕು. ರೈತರಿಗೆ ಸಮರ್ಪಕ ಬೆಳೆ ಹಾನಿ ಪರಿಹಾರ ಕೊಡಬೇಕು’ ಎಂದರು.