ಯಾದಗಿರಿ: ‘ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು’ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾದಕ ದ್ರವ್ಯ ನಿಯಂತ್ರಣ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಸರಿಯಾಗಿ ಜಾಗೃತಿ ಮೂಡಿಸಬೇಕು. ಅಬಕಾರಿ ಇಲಾಖೆಯಿಂದ ಮಾದಕ ದ್ರವ್ಯಗಳ ಅಕ್ರಮ ಸಾಗಣೆ, ಮಾರಾಟದ ಬಗ್ಗೆ ತೀವ್ರ ನಿಗಾ ಇಡಬೇಕು. ಅನಿರೀಕ್ಷಿತ ದಾಳಿ ಮಾಡಿ ಪ್ರಕರಣ ದಾಖಲಿಸಬೇಕು. ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಅವಶ್ಯಕ ಕ್ರಮಗಳನ್ನೂ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.

‘ಎಲ್ಲ ಔಷಧೀಯ ಅಂಗಡಿಗಳು ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಬಿತ್ತಿ ಪತ್ರಗಳನ್ನು ಅಳವಡಿಸಬೇಕು. ನಿಯಮ ಉಲ್ಲಂಘನೆಗೆ ಪರವಾನಿಗೆ ರದ್ದತಿ ಕ್ರಮ ಕೈಗೊಳ್ಳಬೇಕು. ಎಲ್ಲ ಬಾರ್ಗಳಲ್ಲಿ ಎನ್ಸಿಬಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಯುವ ಜನಾಂಗದಲ್ಲಿ ಮಾದಕ ದ್ರವ್ಯಗಳ ಪದಾರ್ಥ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಮುಂದಾಗಬೇಕು’ ಎಂದರು.

‘ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳು ನೋಡಲ್ ಅಧಿಕಾರಿಗಳಾಗಿದ್ದು, ಅಕ್ರಮ ಮಾದಕ ದ್ರವ್ಯಗಳ ಸಾಗಾಟ, ಸೇವನೆ ಕಂಡು ಬಂದಲ್ಲಿ ಸಂಬಂಧಿಸಿದ ಇಲಾಖೆ ಗಮನಕ್ಕೆ ತರಬೇಕು. ಮದ್ಯ ವ್ಯಸನಿಗಳು, ಮಾದಕ ವಸ್ತುಗಳ ವ್ಯಸನಿಗಳ ಚಿಕಿತ್ಸೆಗಾಗಿ ಯಿಮ್ಸ್ನಲ್ಲಿ 30 ಬೆಡ್ಗಳನ್ನು ಕಾಯ್ದಿರಿಸಬೇಕು’ ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ, ಡಿವೈಎಸ್ಪಿ ಸುರೇಶ್ ನಾಯಕ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವ: ಸಕಲ ಸಿದ್ಧತೆಗೆ ಸೂಚನೆ

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚಿಸಿದರು. ಶುಕ್ರವಾರ ಸಭೆ ನಡೆಸಿ ಮಾತನಾಡಿದ ಅವರು ‘ಅಂದು ಬೆಳಿಗ್ಗೆ 7ರಿಂದ 8ರವರೆಗೆ ಸರ್ಕಾರಿ ಕಚೇರಿಗಳು ಶಾಲಾ– ಕಾಲೇಜುಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು. ಬಳಿಕ ನಗರದ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು ರಂಗೋಲಿ ಸ್ಪರ್ಧೆಯ ವಿಜೇತ ಮೂವರಿಗೆ ಬಹುಮಾನ ನೀಡಬೇಕು’ ಎಂದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಸರಿಯಾದ ವ್ಯವಸ್ಥೆ ಮಾಡಿ ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಬೇಕು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಶ್ಯಕ ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಕ್ಷೇತ್ರಗಳಸಾಧನೆಕರಿಗೆ ಸನ್ಮಾನಿಸಬೇಕು. ಪಥಸಂಚಲನಕ್ಕೆ ಪೂರ್ವತಯಾರಿ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.