ಯಾದಗಿರಿ: ‘ನಾನು ಶಾಸಕನಾದ ಬಳಿಕ ಮತಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಮಾಹಿತಿ ಪಡೆದು, ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲಾ ವರ್ಗದ ಜನರಿಗೆ ಅನುಕೂಲತೆ ಕಲ್ಪಿಸಲಾಗುತ್ತಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.

ನಗರದ ಜಿಲ್ಲಾ ಆಯುಷ್ ಆಸ್ಪತ್ರೆ ಸಮೀಪ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಯಡಿ ಜಿಲ್ಲಾ ವಕ್ಫ್ ಸಲಹಾ ಸಮಿತಿ, ಕೆಆರ್ಐಡಿಎಲ್ನಿಂದ ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನೂತನ ಶಾದಿಮಹಲ್ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಶಾದಿ ಮಹಲ್ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಸರ್ಕಾರದಿಂದ ನಾನು ₹ 50 ಲಕ್ಷ ಅನುದಾನ ಬಿಡುಗಡೆ ಮಾಡಿಸಿದ ನಂತರ ಪೂರ್ಣಗೊಂಡಿದೆ. ಈ ಭಾಗದಲ್ಲಿರುವ ಅಲ್ಪಸಂಖ್ಯಾತ ಬಡ ಕುಟುಂಬಗಳ ಶುಭ ಕಾರ್ಯಗಳಿಗೆ ನೆರವಾಗಲಿದೆ. ಇದರ ಲಾಭ ಪಡೆಯುವುದರ ಜೊತೆಗೆ ಸರಿಯಾಗಿ ನಿರ್ವಹಣೆ ಮಾಡಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು’ ಎಂದರು.

‘ಶಾದಿಮಹಲ್ ಕಟ್ಟಡಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಐದು ಗ್ಯಾರಂಟಿಗಳ ಸೌಲಭ್ಯಗಳು ಎಲ್ಲಾ ವರ್ಗದ ಜನರಿಗೆ ತಲುಪಿಸಲಾಗಿದೆ. ಅಲ್ಲದೇ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದರು.

‘ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ಅನುಕೂಲತೆ ಮಾಡಿಕೊಡಲಾಗುತ್ತಿದೆ. ಮತಕ್ಷೇತ್ರದ ಜನರಲ್ಲಿ ಶಾಂತಿ, ಸಾಮರಸ್ಯ ವೃದ್ಧಿಯಾಗುವ ಜೊತೆಗೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ’ ಎಂದು ಹೇಳಿದರು.

ಮುಸ್ಲಿಂ ಸಮಾಜದ ಕಾರ್ಯದರ್ಶಿ ಅಫೀಜ್ ಪಟೇಲ್ ಮಾತನಾಡಿ, ‘ಶಾಸಕರು ಜನರನ್ನು ನೇರವಾಗಿ ಭೇಟಿಯಾಗಿ ಕುಂದು-ಕೊರತೆಗಳನ್ನು ಆಲಿಸುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರವೂ ಸೂಚಿಸುತ್ತಿದ್ದಾರೆ. ನಗರದಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಂಡಿದ್ದಾರೆ’ ಎಂದರು.

ಕಾರ್ಯಕ್ರಮದಲ್ಲಿ ‘ಯುಡಾ’ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಅಲ್ಪಸಂಖ್ಯಾತ ಇಲಾಖೆ ಜಿಲ್ಲಾ ಅಧಿಕಾರಿ ಭಾಗ್ಯಶ್ರೀ ಕುಂಬಾರ, ಕೆಆರ್ಐಡಿಎಲ್ ಯೋಜನಾ ಎಂಜಿನಿಯರ್ ನಾಗೇಶ ಕುಲಕರ್ಣಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ನಿಲೋಫರ್ ಬಾದಲ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಪ್ರಮುಖರಾದ ಸಲೀಂ ಹುಂಡೆಕಾರ, ಮಹಮದ್ ಅನ್ಸಾರುದ್ದೀನ್, ನಾಸೀರ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.