ಗುರುವಾರ , ಮೇ 6, 2021
23 °C

ಯಾದಗಿರಿ ನಗರಸಭೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರದ ವಾರ್ಡ್ ಸಂಖ್ಯೆ 14ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್ ಮಹಿಳಾ ಸದಸ್ಯೆ ನಿಧನದಿಂದ ತೆರವಾದ ಸ್ಥಾನಕ್ಕೆ ಮಾರ್ಚ್ 29 ರಂದು ಉಪ ಚುನಾವಣೆ ನಡೆದಿತ್ತು.

533 ಪುರುಷರು, 529 ಮಹಿಳಾ ಮತದಾರರು ಮತ ಚಲಾಯಿಸಿದ್ದು, ಶೇ 64.95 ರಷ್ಟು ಮತದಾನವಾಗಿತ್ತು.

ಉಪ ಚುನಾವಣೆಯಲ್ಲಿ 1,062 ಮತದಾರರು ಮತಚಲಾಯಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸನಾ ಫಾತೀಮಾ 727 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ನಸೀಮಾ ವಾಜೀದ 292 ಮತ, ಜೆಡಿಎಸ್ ಅಭ್ಯರ್ಥಿ ಹಸೀನಾ ಬೇಗಂ ಕೇವಲ 42 ಮತಗಳನ್ನು ಪಡೆದಿದ್ದಾರೆ. ಒಂದು ಮತ ನೋಟಾ ಆಗಿದೆ.

ಕಾಂಗ್ರೆಸ್ ವಿಜಯೋತ್ಸವ: ತೀವ್ರ ಕೂತೂಹಲ ಕೆರಳಿಸಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 435 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ತಂದಿದ್ದಾರೆ. ಚುನಾವಣೆ ಫಲಿತಾಂಶ ಘೋಷಣೆ ಆಗುತ್ತಿದಂತೆ ಕೈ ನಾಯಕರು ಜಿಲ್ಲಾ‌ ಕಾಂಗ್ರೆಸ್ ಕಚೇರಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರ್ದಶನ ನಾಯಕ  ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದರು.


ಜಿಲ್ಲಾ‌ ಕಾಂಗ್ರೆಸ್ ಕಚೇರಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರ್ದಶನ ನಾಯಕ  ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದರು.

ಕೆಪಿಸಿಸಿ ವೀಕ್ಷಕ ರಾಘವೇಂದ್ರ ಮಾನಸಗಲ್, ಮನಸೂರ್ ಆಫಘಾನ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು