ನಾರಾಯಣಪುರ (ಯಾದಗಿರಿ): ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬರು ಪತ್ನಿ ಹಾಗೂ ಸಂಬಂಧಿಕರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ್ದು, ಒಬ್ಬರು ಸಾವನ್ನಪ್ಪಿರುವ ಘಟನೆ ನಾರಾಯಣಪುರದ ಛಾಯಾ ಕಾಲೊನಿಯಲ್ಲಿ ಬುಧವಾರ ನಡೆದಿದೆ.

ಆರೋಪಿ ಶರಣಪ್ಪ ಈರಣ್ಣ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ಶರಣಪ್ಪ ಸರೂರ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಘಟನೆ ವಿವರ:ಆರೋಪಿ ಶರಣಪ್ಪ ಈರಣ್ಣ ಪತ್ನಿ ಹುಲಿಗೆಮ್ಮ ಜತೆ ಆಗಾಗ ಜಗಳವಾಡುತ್ತಿದ್ದ. ಇದರಿಂದ ಸುಮಾರು 14 ತಿಂಗಳ ಹಿಂದೆ ಹುಲಿಗೆಮ್ಮ ಪತಿ ಜೊತೆ ಜಗಳವಾಡಿ ಬೇರೆ ಮನೆ ಮಾಡಿ ವಾಸ ಮಾಡಿಕೊಂಡಿದ್ದಾರೆ. ಹುಲಿಗೆಮ್ಮ ರಾಯಚೂರು ಜಿಲ್ಲೆಯ ಲಿಂಗಸೂಗೂರು ಕೆಎಸ್ಆರ್ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಆರೋಪಿ ತನ್ನ ಪತ್ನಿಯಿಂದ ವಿಚ್ಛೇದನ ಪಡೆಯುವ ಕುರಿತು ಮಾತನಾಡಿದಾಗ ಆಕೆ ವಿಚ್ಛೇದನ ನೀಡಲು ಒಪ್ಪಿಲ್ಲ. ಇದರಿಂದ ಶರಣಪ್ಪ ಪತ್ನಿಯ ತಂದೆ ಹಾಗೂ ಮೂರು ಜನ ಸಂಬಂಧಿಕರಿಗೆ ನ್ಯಾಯ ಪಂಚಾಯಿತಿ ಮಾಡಲು ನಾರಾಯಣಪುರದ ಮನೆಗೆ ಕರೆಸಿಕೊಂಡಿದ್ದಾನೆ. ನಂತರ ನಾಲ್ವರನ್ನು ಮನೆಯಲ್ಲಿ ಕೂಡಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಾಗಿಲಿಗೆ ಕೀಲಿ ಹಾಕಿ ಹೊರಗೆ ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಶೇ40ರಷ್ಟು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.