ಯಾದಗಿರಿ: ‘ನಗರದ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಮತ್ತು ಶಾಸ್ತ್ರಿ ವೃತ್ತಗಳಿಗೆ ಆಧುನಿಕತೆಯ ಸ್ಪರ್ಶ ನೀಡಲಾಗುತ್ತಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.

ಇಲ್ಲಿನ ನೇತಾಜಿ ಸುಭಾಷ್ ಹಾಗೂ ಶಾಸ್ತ್ರಿ ವೃತ್ತಗಳಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಗಳಿಗೆ ಈಚೆಗೆ ಭೇಟಿ ನೀಡಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿ ಈ ಎರಡೂ ವೃತ್ತಗಳ ಅಭಿವೃದ್ಧಿಗೆ ₹ 14.90 ಲಕ್ಷ ಬಿಡುಗಡೆಯಾಗಿದೆ. ನಿರ್ಮಿತಿ ಕೇಂದ್ರವು ಕಾಮಗಾರಿಯ ಜವಾಬ್ದಾರಿ ಹೊತ್ತುಕೊಂಡಿದೆ’ ಎಂದರು.

‘14 ಅಡಿಯ ಸುತ್ತು ಗೋಡೆ, ಗ್ರಾನೈಟ್ ಹಾಸಿಗೆ, ಸ್ಟೀಲ್ ಗ್ರಿಲ್, ಮೆಟ್ಟಿಲು, ದೀಪಾಲಂಕಾರ, ಕಾರಂಜಿ ನಿರ್ಮಾಣ ಆಗಲಿವೆ’ ಎಂದು ಹೇಳಿದರು.

ಈ ವೇಳೆ ನಗರಸಭೆ ಸದಸ್ಯ ಚನ್ನಕೇಶವ ಬಾಣತಿಹಾಳ, ಮಲ್ಲಿಕಾರ್ಜುನ ಈಟೆ, ನಿರ್ಮಿತಿ ಕೇಂದ್ರದ ಎಇ ರವಿ ಕಂದಕೂರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.