ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ; ಧಾರ್ಮಿಕ ಕೇಂದ್ರಗಳಿಗೆ ನೋಟಿಸ್

Last Updated 8 ಏಪ್ರಿಲ್ 2022, 5:10 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಮಸೀದಿ, ದೇವಸ್ಥಾನ, ಚರ್ಚ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡುವವರಿಗೆ ಪೊಲೀಸ್ ಅಧಿಕಾರಿಗಳು ನೋಟಿಸ್ಜಾರಿ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಗೋಗಿ ಠಾಣೆಯ 32, ಭೀಮರಾಯನಗುಡಿಯ 28, ಶಹಾಪುರದ 50 ಹಾಗೂ ವಡಗೇರಾ ಠಾಣೆ ವ್ಯಾಪಿಯ 20 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್‌ ಕಳುಹಿಸಲಾಗಿದೆ. ಮಂದಿರ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆಯ ಬಗ್ಗೆ ವಿವಾದದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಬ್ದ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ನೋಟಿಸ್‌ ಜಾರಿ ಮಾಡಿದೆ ಎಂದು ಪೊಲೀಸ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಮಸ್ಯೆ ಬಿಗಡಾಯಿಸುವ ಮುನ್ನ ಪೊಲೀಸರು ಎಚ್ಚೆತ್ತುಕೊಂಡು ಮೊಳಕೆಯಲ್ಲಿ ಚಿವುಟಿ ಮಟ್ಟ ಹಾಕಬೇಕು. ಈಗಾಗಲೇ ಹಿಜಾಬ್ ವಿವಾದದಿಂದ ಎಲ್ಲರೂ ಸಾಕಷ್ಟು ಪಾಠ ಕಲಿತಿದ್ದೇವೆ. ಮುಂದೆ ಇಂತಹ ದ್ವೇಷ ಭಾವನೆಗಳಿಗೆ ಅವಕಾಶ ನೀಡಿದಂತೆ ಕ್ರಮ ತೆಗೆದುಕೊಳ್ಳಬೇಕು ಎಂದುರೈತ ಮುಖಂಡ ಸಿದ್ದಯ್ಯ ಹಿರೇಮಠ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT