ಯಾದಗಿರಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ಅವರು ಮಾತನಾಡಿದರು
‘ಸ್ಫೂರ್ತಿ ಆಸಕ್ತಿಯಿಂದ ಪಾಲ್ಗೊಳ್ಳಿ’
‘ಮೂರು ದಿನಗಳು ನಡೆಯುವ ಕ್ರೀಡಾಕೂಟದಲ್ಲಿ ಕ್ರೀಡಾ ಸ್ಫೂರ್ತಿ ಹಾಗೂ ಆಸಕ್ತಿಯಿಂದ ಪಾಲ್ಗೊಂಡು ಉತ್ತಮವಾದ ನೆನಪುಗಳೊಂದಿಗೆ ಮುಕ್ತಾಯಗೊಳಿಸಿ’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು. ‘ಪೊಲೀಸರು ನಿತ್ಯದ ಕೆಲಸದಲ್ಲಿ ಸಾಕಷ್ಟು ಒತ್ತಡದಲ್ಲಿದ್ದು ಕೆಲಸ ಮಾಡುತ್ತಾರೆ. ಹಾಗಾಗಿ ಕ್ರೀಡೆಯಲ್ಲಿ ಚಟುವಟಿಕೆಯಿಂದ ತೊಡಗಿಸಿಕೊಂಡರೆ ಎಲ್ಲಾ ಕಾರ್ಯಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಲು ಸಹಾಯಕ ಆಗುತ್ತದೆ’ ಎಂದರು.