ಯಾದಗಿರಿ: ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ನಿರ್ಲಕ್ಷ್ಯ, ಜಿಲ್ಲಾಡಳಿತದ ಆಡಳಿತ ವೈಫಲ್ಯ ಖಂಡಿಸಿ ಕಲ್ಯಾಣ ಕರ್ನಾಟಕ ಯುವ ಸಂಘ, ಕೆಆರ್ಎಸ್ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ನೇತಾಜಿ ಸುಭಾಷ್ಚಂದ್ರ ಬೋಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕ್ರೀಡಾಪಟುಗಳ ಪದಕಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕ್ರೀಡಾಂಗಣಕ್ಕೆ ಕೆಕೆಆರ್ಡಿಬಿಯಿಂದ ₹ 10 ಕೋಟಿ ಬಿಡುಗಡೆಯಾಗಿದ್ದರೂ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿಲ್ಲ. ರನ್ನಿಂಗ್ ಟ್ರ್ಯಾಕ್ ಬೇಕಾಬಿಟ್ಟಿಯಾಗಿ ನಿರ್ಮಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಹಿಂದೆ ನಡೆಸಿದ ಪ್ರತಿಭಟನೆಯ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ನೀಡಿದ ಭರವಸೆಯನ್ನು ಈಡೇರಿಸಬೇಕು. ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಕ್ರಿಯಾ ಯೋಜನೆ ಮಾಡಿ, ಪರಿಹಾರ ಕಲ್ಪಿಸಬೇಕು. 7 ದಿನಗಳ ಒಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಮಾನವ ಹಕ್ಕುಗಳ ಆಯೋಗ ಹಾಗೂ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಪುನೀತ್ ರಾಜ್ ಕಾಮತಗಿ, ಲೋಕೇಶ ರಾಠೋಡ್, ಎಸ್.ಜಗನ್ನಾಥ ಚಿಂತನಳ್ಳಿ, ಎಸ್.ನಿಜಲಿಂಗಪ್ಪ ಪೂಜಾರಿ, ಚರಿತಾ ಕೊಂಕಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.