ಶಹಾಪುರ: ‘ಪ್ರಜಾಪ್ರಭುತ್ವ ಕೇವಲ ಮತದಾನವಲ್ಲ. ಅದು ಜನತೆ ಸಕ್ರೀಯವಾಗಿ ಭಾಗವಹಿಸುವ ಆಚರಣೆಯಾಗಿದೆ. ನಾವೆಲ್ಲರೂ ಉತ್ತಮ ಬದುಕು ಕಟ್ಟಿಕೊಳ್ಳಲು ಸಂವಿಧಾನ ಓದಿ. ಸಂವಿಧಾನ ನಮ್ಮ ದೈನಂದಿನ ಬದುಕಿನ ದಿಕ್ಸೂಚಿಯಾಗಿದೆ’ ಎಂದು ಉಪನ್ಯಾಸಕ ಬಿ.ಆರ್.ಅಂಚೆಸೂಗೂರ ತಿಳಿಸಿದರು.

ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಅಕಾಡೆಮಿ ಬೆಂಗಳೂರು ಆಶ್ರಯದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕುರಿತು ವಿಷಯದ ಬಗ್ಗೆ ಅವರು ಮಾತನಾಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್ ಮಾತನಾಡಿ, ‘ವಿದ್ಯಾರ್ಥಿ ದೆಸೆಯಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಿಸಿಕೊಳ್ಳುವುದರ ಜತೆಯಲ್ಲಿ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ವಿದ್ಯಾರ್ಥಿಗಳು ಮೊಬೈಲ್, ಅಂತರ್ಜಾಲದಿಂದ ದೂರವಿದ್ದು ಕಷ್ಟಪಟ್ಟು ಅಧ್ಯಯನ ಮಾಡಬೇಕು. ಅಲ್ಲದೆ ಯುವ ಪೀಳಿಗೆ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಯುವಿಗಾಗಿ ಶ್ರಮವಹಿಸಬೇಕು’ ಎಂದರು.

ಕಾಲೇಜಿನ ಪ್ರಾಚಾರ್ಯ ವಾಯ್.ಎಸ್.ವಜ್ಜಲ, ಉಪನ್ಯಾಸಕ ಸುರೇಶ ಅರುಣಿ, ಶೋಭಾ, ಕನ್ನಡ ಜಾಗೃತಿ ಸಮಿತಿ ಸದಸ್ಯ ಬಸವರಾಜ ಸಿಣ್ಣೂರ ಭಾಗವಹಿಸಿದ್ದರು.

ಚಕೋರ ಸಂಚಾಲಕರನ್ನು ನೇಮಿಸಿ

ಶಹಾಪುರ: ಕನ್ನಡ ಸಾಹಿತ್ಯ ಅಕಾಡೆಮಿ ಬೆಂಗಳೂರು ಆಶ್ರಯದಲ್ಲಿನ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಯಾದಗಿರಿ ಜಿಲ್ಲಾ ಸಂಚಾಲಕರನ್ನು ನೇಮಿಸಿ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಮಾನಪ್ಪ ಹಡಪದ ಅವರು ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಶುಕ್ರವಾರ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು ‘ರಾಜ್ಯ ಅಕಾಡೆಮಿ ಸದಸ್ಯರಾಗಿ ಒಂದು ವರ್ಷ ಕಳೆದರು ಸಹ ಜಿಲ್ಲಾ ಸಮಿತಿಯ ಸಂಚಾಲಕರನ್ನು ನೇಮಿಸಿಲ್ಲ. ಚಕೋರ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಸಮಿತಿ ಸದಸ್ಯರೆ ನಿರ್ವಹಿಸಿಕೊಂಡು ಬರುತ್ತಿರುವುದು ಸರಿಯಲ್ಲ. ಸಾಹಿತ್ಯ ಅಕಾಡೆಮಿ ಕೆಲ ವ್ಯಕ್ತಿಗಳ ಸ್ವತ್ತು ಆಗಬಾರದು. ಕನ್ನಡದ ಎಲ್ಲಾ ಮನಸ್ಸುಗಳು ಒಳಗೊಳ್ಳಬೇಕು’ ಎಂದು ತಿಳಿಸಿದರು.

‘ಕಲಬುರಗಿಯಲ್ಲಿ ಜಿಲ್ಲಾ ಸಂಚಾಲಕರನ್ನು ನೇಮಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಇನ್ನೂ ನೇಮಿಸಿಲ್ಲ. ಕೆಲ ದಿನದಲ್ಲಿ ನೇಮಿಸಲಾಗುವುದು’ ಎಂದು ರಾಜ್ಯ ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್ ಸ್ಪಷ್ಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.