ಯಾದಗಿರಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಗರಿಮಾ ಪಂವಾರ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಇವರು ಮೂಲತಃ ರಾಜಸ್ಥಾನದವರಾಗಿದ್ದು, 2018 ರ ಐಎಎಸ್ ಬ್ಯಾಚ್‌ನವರಾಗಿದ್ದಾರೆ. 2020 ರ ಆಗಸ್ಟ್‌ನಿಂದ 2022 ರ ಜನವರಿ ವರೆಗೆ ಬೀದರ್ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಹಾಗೂ 2018ರ ಆಗಸ್ಟ್‌ನಿಂದ 2020 ರ ಆಗಸ್ಟ್‌ವರೆಗೆ ಮಸ್ಸೂರಿ ಮತ್ತು ಬಾಗಲಕೋಟೆ ಜಿಲ್ಲೆಯ ತರಬೇತಿ ಅಧಿಕಾರಿಯಾಗಿ ಹಾಗೂ ಜಿಲ್ಲಾ ತರಬೇತಿದಾರರಾಗಿ ನಂತರ, 2022 ರ ಮಾರ್ಚ್ 3 ರಿಂದ 2023 ರ ಮಾರ್ಚ್ ವರೆಗೆ ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.