ತೊಗರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

7

ತೊಗರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

Published:
Updated:
Prajavani

ಯಾದಗಿರಿ: ಯಾದಗಿರಿ ಎಪಿಎಂಸಿ ಹಾಗೂ ರಾಮಸಮುದ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತೆರೆಯಲಾಗಿರುವ ತೊಗರಿ ಖರೀದಿ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.

’2018–19ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್.ಪಿ.ಓ.ಗಳ ಮೂಲಕ ಖರೀದಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 32 ತೊಗರಿ ಖರೀದಿ ಕೇಂದ್ರಗಳಲ್ಲಿ ಜನವರಿ 14ರವರೆಗೆ ರೈತರ ನೋಂದಣಿಗೆ ಅವಕಾಶ ನೀಡಲಾಗಿದೆ. ಪ್ರತಿ ಕ್ವಿಂಟಲ್ ತೊಗರಿಗೆ ಕೇಂದ್ರ ಸರ್ಕಾರದ ಬೆಂಬಲೆ ಬೆಲೆ ₹5675 ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ₹425 ಸೇರಿ ಒಟ್ಟು ₹6100 ನಿಗದಿಪಡಿಸಲಾಗಿದೆ. ಪ್ರತಿಯೊಬ್ಬ ರೈತರಿಂದ ಎಕೆರೆಗೆ 5 ಕ್ವಿಂಟಲ್‌ನಂತೆ ಗರಿಷ್ಠ 10 ಕ್ವಿಂಟಲ್ ತೊಗರಿಯನ್ನು ಖರೀದಿಸಲಾಗುವುದು ಎಂದು ತಿಳಿಸಿದರು.

ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಜ.14 ಕೊನೆಯ ದಿನವಾಗಿದೆ. ಕಾರಣ ರೈತಬಾಂಧವರು ಕೂಡಲೇ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ಪಹಣಿ, ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆಯನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಣಿಗೆ ಬೆಳೆ ದೃಢೀಕರಣ ಪ್ರಮಾಣ ಪತ್ರ ಅವಶ್ಯಕತೆ ಇರುವುದಿಲ್ಲ. ಒಬ್ಬ ರೈತ ಒಂದೇ ಅರ್ಜಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು ಮತ್ತು ಸರತಿ ಸಾಲಿನಲ್ಲಿ ನಿಂತು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಅವರು ರೈತರನ್ನು
ಕೋರಿದರು.

ಜಿಲ್ಲಾಧಿಕಾರಿಗಳು ರಾಮಸಮುದ್ರ ಎಸ್‌ಬಿಐ ಬ್ಯಾಂಕ್‌ಗೆ ಭೇಟಿ ನೀಡಿ, ಬೆಳೆ ಸಾಲಮನ್ನಾ ಪ್ರಕ್ರಿಯೆ ಪರಿಶೀಲಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಗೋಪಾಲ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !