ಶುಕ್ರವಾರ, ಫೆಬ್ರವರಿ 26, 2021
32 °C

ಯಾದಗಿರಿ: ಜಿಲ್ಲೆಯ ಐದು ಕಡೆ ಕೋ–ವ್ಯಾಕ್ಸಿನ್ ಲಸಿಕೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರದ ಹೊಸ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಐದು ಕಡೆ ಕೋ–ವ್ಯಾಕ್ಸಿನ್ ಲಸಿಕೆಗೆ ಚಾಲನೆ ನೀಡಲಾಯಿತು.

ಶಹಾಪುರ ತಾಲ್ಲೂಕು ಆಸ್ಪತ್ರೆ, ಸುರಪುರ ತಾಲ್ಲೂಕು ಆಸ್ಪತ್ರೆ ಮತ್ತು ನಗರ ಆರೋಗ್ಯ ಕೇಂದ್ರ, ಯರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಗರದ ನೂತನ ಜಿಲ್ಲಾಸ್ಪತ್ರೆಯ ಲಸಿಕೆ ಕೇಂದ್ರದಲ್ಲಿ ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು.


ಯಾದಗಿರಿ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋ–ವ್ಯಾಕ್ಸಿನ್‌ ಲಸಿಕೆಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು

ಜಿಲ್ಲಾಸ್ಪತ್ರೆ ಸಹಾಯಕ ದರ್ಜೆ–2 ನೌಕರ ಅಶೋಕ ಅಗ್ನಿ ಮೊದಲ ಲಸಿಕೆ ಪಡೆದರು. ಅರ್ಧ ಗಂಟೆ ಕಾಲ ಚಿಕಿತ್ಸೆ ಪಡೆದವರನ್ನು ನಿಗಾವಹಿಸಲಾಗಿತ್ತು. ಸದ್ಯಕ್ಕೆ ಲಸಿಕೆ ಪಡೆದ ಫಲಾನುಭವಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಮೊದಲ ಲಸಿಕೆ ಪಡೆದ ಅಶೋಕ ಅಗ್ನಿ ‘ಪ್ರಜಾವಾಣಿ’ ಜೊತೆ ಮಾತನಾಡಿ, ‘ಕೊರೊನಾ ವಾರಿಯರ್‌ ಆಗಿ ಕೆಲಸ ಮಾಡಿದ್ದೇನೆ. ಈಗ ಮೊದಲ ಲಸಿಕೆ ಪಡೆದಿದ್ದು, ಖುಷಿಯಾಗಿದೆ. ಯಾರೂ ಈ ಬಗ್ಗೆ ಭಯ‍‍ಪಡಬಾರದು’ ಎಂದು ಪ್ರತಿಕ್ರಿಯಿಸಿದರು.

ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್, ಡಾ.ನೀಲಮ್ಮ ರೆಡ್ಡಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.


ಯಾದಗಿರಿ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋ–ವ್ಯಾಕ್ಸಿನ್‌ ಲಸಿಕೆ ಹಾಕಿಕೊಳ್ಳಲು ಬಂದಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ

2 ಗಂಟೆ ತನಕ ಲಸಿಕೆ ಪಡೆದವರು
ನೂತನ ಜಿಲ್ಲಾಸ್ಪತ್ರೆ:
15
ಪಿಎಚ್‌ಸಿ ಯರಗೋಳ: 24
ಶಹಾಪುರ ತಾಲ್ಲೂಕು ಆಸ್ಪತ್ರೆ: 50
ಸುರಪುರ ನಗರ ಆರೋಗ್ಯ ಕೇಂದ್ರ: 21
ಸುರಪುರ ತಾಲ್ಲೂಕು ಆಸ್ಪತ್ರೆ: 26
ಒಟ್ಟು: 136

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು