ಸೋಮವಾರ, ಜನವರಿ 27, 2020
15 °C
ಟಂಟಂಗಳಲ್ಲಿ ಜನರ ಸಾಗಣೆ:3 ವಾಹನ ಜಪ್ತಿ

ಯರಗೋಳ: 20 ಮಕ್ಕಳು ಶಾಲೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯರಗೋಳ: ಗ್ರಾಮದಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು, ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ತೆಯಾದ 6ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ತನಿಖೆ ನಡೆಸಿ 20 ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.

ಅನಿರೀಕ್ಷಿತ ದಾಳಿ ಮಾಡಿದಾಗ 1 ಟ್ರ್ಯಾಕ್ಟರ್, 2 ಟಂಟಂ ವಾಹನಗಳಲ್ಲಿ ಸುಮಾರು 80ಕ್ಕೂ ಹೆಚ್ಚು ಜನರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ದಂಡ ವಿಧಿಸುವುದರ ಜತೆಗೆ 1988ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬಂಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.

ಕಾರ್ಮಿಕ ಇಲಾಖೆಯ ನಿರೀಕ್ಷಕ ಶಿವಶಂಕರ ಬಿ.ತಳವಾರ ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ ಹೆಚ್ಚುವರಿ ನಿರೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ತನಿಖಾ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್, ಎಎಸ್‌ಐ ವಿಠ್ಠಲ್, ಹೆಡ್‌ಕಾನ್‌ಸ್ಟೆಬಲ್ ಗುರುನಾಥ ರೆಡ್ಡಿ, ಮಕ್ಕಳ ಸಹಾಯವಾಣಿಯ ನಾಗಪ್ಪ, ಡಿಸಿಪಿಯು ಘಟಕದ ಸಿಬ್ಬಂದಿ ದೇವಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಇದ್ದರು.

ಪ್ರತಿಕ್ರಿಯಿಸಿ (+)