ಯರಗೋಳ: ಸುತ್ತಲಿನ ಹಳ್ಳಿಗಳಲ್ಲಿ ಗುರುವಾರ ಬೆಳಿಗ್ಗೆ ಜಿಟಿ ಜಿಟಿ ಮಳೆಯಾಯಿತು.
ಮುದ್ನಾಳ, ಠಾಣಗುಂದಿ, ಬೊಮ್ಮಚಟ್ನಳ್ಳಿ, ಮಲಕಪ್ಪನಳ್ಳಿ, ವಡ್ನಳ್ಳಿ, ಎಸ್.ಹೊಸಳ್ಳಿ, ಮೋಟ್ನಳ್ಳಿ, ಕೋಟಗೇರಾ, ಚಿಂತಕುಂಟ, ಹೆಡಗಿಮದ್ರ, ಹೊನಗೇರಾ, ಹತ್ತಿ ಕುಣಿ, ಸಮಣಪುರ, ಬಂದಳ್ಳಿ, ಯಡ್ಡಳ್ಳಿ, ಬೆಳಗೇರಾ, ಖಾನಳ್ಳಿ, ಅರಿಕೇರಾ .ಬಿ, ಬಸವಂತಪುರ, ಕ್ಯಾಸಪನಳ್ಳಿ, ಹೋರುಣಚ, ಅಚ್ಚೋಲ, ಗುಲಗುಂದಿ, ಕಂಚಗಾರ ಹಳ್ಳಿ, ಅಬ್ಬೆತುಮಕೂರು, ಬಾಚವಾರ ಹಾಗೂ ಕಟ್ಟಿಗೆ ಶಾಹಾಪುರ ಗ್ರಾಮಗಳಲ್ಲಿ ಮಳೆಯಾಗಿದೆ.
ಹೆಸರು, ತೊಗರಿ, ಹತ್ತಿ ಬೆಳೆಗಳಿಗೆ ಆಸರೆಯಾಗಿದೆ. ಭತ್ತ ನಾಟಿಯು ನಡೆಯುತ್ತಿದೆ. ಕೆರೆ, ಹಳ್ಳ, ಬಾವಿ, ಕೊಳವೆ ಬಾವಿಗಳಲ್ಲಿಯು ನೀರು ಸಂಗ್ರಹವಾಗುತ್ತಿದೆ. ಮಳೆಯಿಂದಾಗಿ ಹಲವು ಗ್ರಾಮದ ರಸ್ತೆಗಳು ಕೆಸರು ಗದ್ದೆಯಂತಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.