ಮಂಗಳವಾರ, ಆಗಸ್ಟ್ 3, 2021
28 °C

ಯರಗೋಳ: ಕ್ವಾರಂಟೈನ್ ಕೇಂದ್ರದಲ್ಲಿದ್ದ ಗರ್ಭಿಣಿಗೆ ಸುರಕ್ಷಿತ ಹೆರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಯರಗೋಳ: ಸಮೀಪದ ಹೊನಗೇರಾ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗರ್ಭಿಣಿಗೆ ಸುರಕ್ಷಿತ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಹಾರಾಷ್ಟ್ರದಿಂದ ಆಗಮಿಸಿದ್ದ ಹಿನ್ನೆಲೆ, ಗ್ರಾಮದ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ಕಟ್ಟಿಗೆ ಶಾಹಪುರ ಗ್ರಾಮದ ಗರ್ಭಿಣಿ ಶಾರದಮ್ಮಗೆ ಕ್ವಾರಂಟೈನ್ ಮಾಡಲಾಗಿತ್ತು.  ಸೋಮವಾರ ಬೆಳಗ್ಗೆ 3:30ಕ್ಕೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಸ್ಥಳದಲ್ಲಿಯೇ ಇದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಹಾಗೂ ಸಿಬ್ಬಂದಿ ವರ್ಗದವರು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು.

'ಬೆಳಗ್ಗೆ 5:30 ಕ್ಕೆ ಹೆಣ್ಣು ಮಗುವಿಗೆ ಶಾರದಮ್ಮ ಜನ್ಮ ನೀಡಿದ್ದಾರೆ. ಆರೋಗ್ಯ ಸಿಬ್ಬಂದಿ ಸುರಕ್ಷಿತ ಹೆರಿಗೆ ಮಾಡಿಸಿದ್ದು,
ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ' ಎಂದು ಯರಗೋಳ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಾಜಿದ್ 'ಪ್ರಜಾವಾಣಿ' ಗೆ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು