ಗುರುವಾರ , ಮೇ 19, 2022
23 °C

ಯಾದಗಿರಿ: ಕೆರೆಯಲ್ಲಿ ಮುಳುಗಿ ಯುವತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ತಾಲ್ಲೂಕಿನ ಮೈಲಾಪುರ ಗ್ರಾಮದ ಹೊನ್ನಕೆರೆಯಲ್ಲಿ ಕಾಲು ಜಾರಿ ಬಿದ್ದ ಯುವತಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಗ್ರಾಮದ ಮೈಲಾರಲಿಂಗೇಶ್ವರ ದೇವರ ದರ್ಶನಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ಶಹಾಬಾದ್‌ ನಗರದ ನಿವಾಸಿ ವಸಂತಾ (24) ಮೃತಪಟ್ಟ ಯುವತಿ.

ಕುಟುಂಬ ಸಮೇತರಾಗಿ ದೇವರ ದರ್ಶನಕ್ಕೆ ಬಂದಿದ್ದು, ಹೊನ್ನಕೆರೆಯಲ್ಲಿ ಸ್ನಾನ ಮಾಡುವಾಗ ವಸಂತಾ ಕಾಲು ಜಾರಿ ನೀರಿಗೆ ಬಿದ್ದರು. ಅವರ ಜೊತೆಗೆ ತೆರಳಿದ್ದ ಸಂಬಂಧಿಕರಾದ ಮಂಜು, ಪ್ರಶಾಂತ, ಲಕ್ಷ್ಮಿ, ಮಲ್ಲಿಕಾರ್ಜುನ ಮೆಟ್ಟಿಲು ಬಳಿ ಸ್ನಾನ ಮಾಡಿ ಮೇಲೆ ಬಂದರು. ವಸಂತಾ ಬಿದ್ದದ್ದು ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು