ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘ಎಲ್ಲಾ 31 ಜಿಲ್ಲೆಗಳಲ್ಲಿ ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ. ಈಗ ಮೀಸಲಾತಿ ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ ಮೂರು ವಾರಗಳ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.