ಗುರುವಾರ , ಸೆಪ್ಟೆಂಬರ್ 24, 2020
27 °C
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ

ರಾಜಶೇಖರ ಪಾಟೀಲ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಯಾದಗಿರಿ: 24 ಸದಸ್ಯರ ಬಲಾಬಲ ಹೊಂದಿರುವ ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ದೇವತ್ಕಲ್ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಸದಸ್ಯ ರಾಜಶೇಖರ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2016ರಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಬಹುಮತಗಳಿಸುವ ಮೂಲಕ ಅಧಿಕಾರ ಹಿಡಿದಿತ್ತು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಆಗ ಕೊಂಕಲ್ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಸದಸ್ಯ ಬಸರೆಡ್ಡಿಗೌಡ ಮಾಲಿ ಪಾಟೀಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 30 ತಿಂಗಳ ಅಧಿಕಾರ ನಡೆಸಿದ ಬಸರೆಡ್ಡಿಗೌಡ ಮಾಲಿಪಾಟೀಲ ವೈಯಕ್ತಿಕ ಕಾರಣ ನೀಡಿ ನ.3ರಂದು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಡಿ.6ರಂದು ಅಧ್ಯಕ್ಷ ಸ್ಥಾನದ ಉಳಿದ ಅವಧಿಗೆ ಚುನಾವಣೆ ನಿಗದಿಯಾಗಿತ್ತು.

ಗುರುವಾರ ಮಧ್ಯಾಹ್ನ 1.30ರವರೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಯಾಗಿತ್ತು. ಕಾಂಗ್ರೆಸ್ ನ ರಾಜಶೇಖರ ಪಾಟೀಲ ಒಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಅಂತಿಮವಾಗಿ ಅವಿರೋಧ ಆಯ್ಕೆ ಘೋಷಿಸಲಾಯಿತು.

ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ್‌ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್.ಮನ್ನೀಕೇರಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು