ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕಾನೂನು ಅರಿವು ಎಲ್ಲರಿಗೂ ಅಗತ್ಯ’

Published : 18 ನವೆಂಬರ್ 2017, 9:52 IST
ಫಾಲೋ ಮಾಡಿ
Comments

ಸುರಪುರ: ‘ಎಲ್ಲರಿಗೂ ಕಾನೂನಿನ ಜ್ಞಾನ ಅಗತ್ಯ’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ನಾಗರಾಜೇಗೌಡ ಹೇಳಿದರು. ರಂಗಂಪೇಟೆಯ ಕರ್ನಾಟಕ ಬಿ.ಇಡಿ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಮಕ್ಕಳು ಮತ್ತು ಅವರ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಕಾನೂನು ಅರಿವು- ನೆರವು ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ನ್ಯಾಯಾಂಗ ಇಲಾಖೆ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ, ಕಾನೂನು ಸಾಕ್ಷರತಾ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.

‘ಪ್ರತಿಯೊಬ್ಬರಲ್ಲಿ ಕಾನೂನು ಅರಿವು ಮೂಡಿದಾಗ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತವೆ. ಈ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ದೇಶದ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಧೀಶರಾದ ವಿನೋದ ಬಾಳನಾಯ್ಕ, ಅಮರನಾಥ್ ಬಿ.ಎನ್ ಮಾತನಾಡಿ, ‘ಜನ ಸಾಮಾನ್ಯರಲ್ಲಿ ಕಾನೂನು ಅರಿವಿರದ ಕಾರಣ ಸಮಸ್ಯೆಗಳು ಹೆಚ್ಚುತ್ತಿವೆ. ಕಾನೂನು ಗೌರವಿಸಿ, ಪಾಲನೆ ಮಾಡಬೇಕು’ ಎಂದರು. ವಿ.ಎಸ್. ಬೈಚಬಾಳ, ಅಬ್ದುಲ್ ಜಲೀಲ್ ಉಪನ್ಯಾಸ ನೀಡಿದರು. ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಸಂಸ್ಥೆಯ ಮಲ್ಲಿಕಾರ್ಜುನ ಬಿಲ್ಲವ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯೆ ರೇಣುಕಾ ಕನಕಗಿರಿ, ಮಲ್ಕಮ್ಮ ಬಿರಾದಾರ್ ಇದ್ದರು.ಎಲ್ಲರಿಗೂ ಕಾನೂನಿನ ಜ್ಞಾನ ಅಗತ್ಯ’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ನಾಗರಾಜೇಗೌಡ ಹೇಳಿದರು.

ರಂಗಂಪೇಟೆಯ ಕರ್ನಾಟಕ ಬಿ.ಇಡಿ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಮಕ್ಕಳು ಮತ್ತು ಅವರ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಕಾನೂನು ಅರಿವು- ನೆರವು ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ನ್ಯಾಯಾಂಗ ಇಲಾಖೆ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ, ಕಾನೂನು ಸಾಕ್ಷರತಾ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.

‘ಪ್ರತಿಯೊಬ್ಬರಲ್ಲಿ ಕಾನೂನು ಅರಿವು ಮೂಡಿದಾಗ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತವೆ. ಈ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ದೇಶದ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಧೀಶರಾದ ವಿನೋದ ಬಾಳನಾಯ್ಕ, ಅಮರನಾಥ್ ಬಿ.ಎನ್ ಮಾತನಾಡಿ, ‘ಜನ ಸಾಮಾನ್ಯರಲ್ಲಿ ಕಾನೂನು ಅರಿವಿರದ ಕಾರಣ ಸಮಸ್ಯೆಗಳು ಹೆಚ್ಚುತ್ತಿವೆ. ಕಾನೂನು ಗೌರವಿಸಿ, ಪಾಲನೆ ಮಾಡಬೇಕು’ ಎಂದರು. ವಿ.ಎಸ್. ಬೈಚಬಾಳ, ಅಬ್ದುಲ್ ಜಲೀಲ್ ಉಪನ್ಯಾಸ ನೀಡಿದರು. ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಸಂಸ್ಥೆಯ ಮಲ್ಲಿಕಾರ್ಜುನ ಬಿಲ್ಲವ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯೆ ರೇಣುಕಾ ಕನಕಗಿರಿ, ಮಲ್ಕಮ್ಮ ಬಿರಾದಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT