ಯಾದಗಿರಿ : ಯುನೈಟೆಡ್ ಥಿಯೋಲಾಜಿಕಲ್ ಕಾಲೇಜು ಮತ್ತು ಅಮ್ನೆಸ್ಟಿ ಸಂಸ್ಥೆಯ ದೇಶದ್ರೋಹಿ ಚಟುವಟಿಕೆ ಹಾಗೂ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯನ್ನು ಖಂಡಿಸಿ ಯಾದಗಿರಿಯಲ್ಲಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಮಾಡಿ ಟೈರ್ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ಶಾಸ್ತ್ರೀ ವೃತ್ತದವರೆಗೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವರನ್ನು ಬಂಧಿಸುವಂತೆ ಆಗ್ರಹಿಸಿದರು.

‘ಬ್ರೋಕನ್ ಫ್ಯಾಮಿಲಿಸ್’ ಎನ್ನುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕಾಶ್ಮಿರಿ ವಿದ್ಯಾರ್ಥಿಗಳು ಮತ್ತು ಕಾಶ್ಮಿರಿ ಕುಟುಂಬಗಳು, ಬೆಂಗಳೂರಿನ ಕ್ರೈಸ್ತ ಕಾಲೇಜಿನ ಅಧ್ಯಾಪಕರು ಮತ್ತು ಕೆಲ ವಿಕೃತ ಮನಸ್ಥಿತಿಯವರು ಸೇರಿಕೊಂಡು ಶಾಂತಿ ಕದಡುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ನೆಮ್ಮದಿಯಿಂದ ಇದ್ದ ಬೆಂಗಳೂರಿನಲ್ಲಿ ದೇಶದ್ರೋಹಿ ಚಟುವಟಿಕೆಯ ವಿಷ ಬೀಜವನ್ನು ಬಿತ್ತುವ ಪ್ರಯತ್ನ ಮಾಡಿದ ದ್ರೋಹಿಗಳನ್ನು ಜೈಲಿಗಟ್ಟಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಘಟನೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಾನವೀಯತೆ ಮರೆತು ಹೊಡೆದಿರುವುದು ಖಂಡನೀಯ. ಇಲ್ಲಿ ಹೋರಾಟ ಮಾಡುತ್ತಿರುವುದು ದೇಶಕ್ಕಾಗಿ ಹೊರತು, ಯಾರದೊ ಒಬ್ಬರ ಹಿತಾಸಕ್ತಿಗಲ್ಲ. ಪೊಲೀಸರು ವಿದ್ಯಾರ್ಥಿಗಳನ್ನು ಹೊಡೆಯುತ್ತಿ ರುವುದು ದುರಾದೃಷ್ಟಕರ ಎಂದು ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸೇನೆಯು ಜಮ್ಮು ಮತ್ತು ಕಾಶ್ಮಿರದಲ್ಲಿ ಶಾಂತಿ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸಿದೆ. ಅಲ್ಲಿನ ಜನರ ರಕ್ಷಣೆಗೆ ಸದಾ ಬದ್ಧವಾಗಿದೆ. ಪ್ರವಾಹ, ಭೂಕಂಪ ಸಂದರ್ಭಗಳಲ್ಲಿ ಸೇನೆಯ ಕಾರ್ಯ ಜನಮೆಚ್ಚುಗೆ ಗಳಿಸಿದೆ. ಕಳೆದ ಎರಡು ವರ್ಷಗಳಿಂದ ಕಣಿವೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಇದು ಭಯೋತ್ಪಾದ ಕರಿಗೆ ಹಾಗೂ ಪ್ರತ್ಯೇಕತಾವಾದಿಗಳಿಗೆ ನುಂಗಲಾರದ ತುತ್ತಾಗಿದೆ. ಹೇಗಾದರು ಮಾಡಿ ಸೇನೆಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಈ ರೀತಿಯ ಕಾರ್ಯಕ್ರಮಗಳನ್ನು ದೇಶದಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆಯಲ್ಲಿ ರಾಜ್ಯಕಾರ್ಯ ಕಾರಣಿ ಸದಸ್ಯ ನಿತೇಶ ಎಂ.ಕುರಕುಂದಿ, ಕೃಷ್ಣಾ ಭಜಂತ್ರಿ, ಬಿರೇಶ ಚಿರಾತಕ, ಭೀಮು ಪೂಜಾರಿ, ಮಲ್ಲು ಬಡಿಗೇರ, ಮಲ್ಲು ತಡಬಿಡಿ, ಬನ್ನಮ್ಮ, ಅಂಬಿಕಾ, ಸುರೇಖಾ, ವಿಜಯಲಕ್ಷ್ಮಿ, ಮಹೇಶ ಜಿನಕೇರಾ, ಸುನಿಲ್ ಕಡೇಚೂರ, ರೂಪೇಶ, ಸಂದೀಪ, ವಿಜಯ ಯಳವಾರ, ನವಿನ, ಅಕ್ಷಯ, ಅರುಣ, ಅಮರೇಶ, ಅರುಣ ಪೂಜಾರಿ ಇದ್ದರು.

ಸುರಪುರ ವರದಿ: ಭಾರತೀಯ ಸೇನೆಯ ವಿರುದ್ಧ ಘೋಷಣೆಗಳನ್ನು ಕೂಗಿದ ದೇಶ ದ್ರೋಹಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮುಖಂಡ ಉಪೇಂದ್ರ ನಾಯಕ ಮಾತನಾಡಿ, ‘ಬೆಂಗಳೂರಿನ ಯುನೈಟೆಡ್ ಥಿಯೋಲಾಜಿಕಲ್ ಕಾಲೇಜಿನಲ್ಲಿ ದೇಶ ದ್ರೋಹಿಗಳು ಶನಿವಾರ ಸಭೆ ನಡೆಸಿ, ಕಾಶ್ಮೀರ ಸಂಘರ್ಷ ಕುರಿತು ಭಾರತಿಯ ಸೇನೆಯ ವಿರುದ್ದ ಘೋಷಣೆ ಕೂಗುವ ಮೂಲಕ ಭಾರತೀಯರ ಸ್ವಾಭಿಮಾನ ಕೆಣಕಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯದ ಗೃಹ ಸಚಿವರ ತವರು ಕ್ಷೇತ್ರ ತುಮಕೂರಿನ ಎಸ್.ಎಸ್.ಐ.ಟಿ. ಕಾಲೇಜಿನಲ್ಲೂ ಕೂಡಾ ಕೆಲ ವಿದ್ಯಾರ್ಥಿ ಗಳು ದೇಶದ್ರೋಹದ ಘೋಷಣೆಗಳನ್ನು ಕೂಗಿದ್ದಾರೆ. ಆದರೆ ಪೊಲೀಸರು ಅವರ ವಿರುದ್ಧ ಇದುವರೆಗೂ ಪ್ರಕರಣ ದಾಖಲಿಸದಿರುವುದು ದುರದೃಷ್ಟಕರ ಸಂಗತಿ. ಗೃಹ ಸಚಿವರು ನೈತಿಕ ಹೊಣೆಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಲಕ್ಷ್ಮೀಕಾಂತ ದೇವರಗೋನಾಲ ಮಾತನಾಡಿ, ‘ದೇಶದ್ರೋಹಿಗಳ ಕೃತ್ಯ ವನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭ ಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಬೀಸಿ ಹಲ್ಲೆ ಮಾಡಿದ್ದಾರೆ. ದೇಶದ್ರೋಹಿಗಳನ್ನು ಹಿಡಿದು ಶಿಕ್ಷಿಸಬೇಕಿದ್ದ ಪೊಲೀಸರು ದೇಶ ಪ್ರೇಮಿಗಳ ಮೇಲೆ ಹಲ್ಲೆ ಮಾಡಿರುವುದು ನಾಚಿಕೆಗೇಡು ಸಂಗತಿ ಎಂದು ದೂರಿದರು.

‘ಸಭೆ ನಡೆಸಲು ಅವಕಾಶ ಮಾಡಿಕೊಟ್ಟ ಅಮ್ನೇಷ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಬೇಕು. ಭಾರತೀಯ ಸೇನೆಯ ವಿರುದ್ದ ಘೋಷಣೆ ಕೂಗಿದ ದೇಶ ದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ ಪೊಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು’ ಎಂದು ದೂರಿದರು.

ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಸಲ್ಲಿಸಿದರು. ಮರಿಸ್ವಾಮಿ ಕವಡಿಮಟ್ಟಿ, ನಾಗರಾಜ ಮಕಾಶಿ, ಶರಣು ನಾಯಕ, ಮಲ್ಲಿಕಾರ್ಜುನ, ಮಲ್ಲು ಬಾದ್ಯಾಪುರ, ಪರಮಣ್ಣ ಕನ್ನೆಳ್ಳಿ, ರಾಧಾ, ರೇಣುಕಾ, ಭಾಗ್ಯ, ಸವಿತಾ, ರಾಘು ಚಿನ್ನಾಕಾರ, ಸಂತೋಷ ಕುಂಬಾರ, ರವಿ ಚಿಕ್ಕನಳ್ಳಿ , ಮಾನಪ್ಪ ಚನ್ನೂರು, ಹೈಯ್ಯಾಳಪ್ಪ ಹಾದಿಮನಿ, ಅಂಬ್ರೇಶ, ಶಶಿಕಾಂತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ದೇಶದ್ರೋಹಿಗಳ ಬಂಧಿಸಲು ಆಗ್ರಹ
ಶಹಾಪುರ: ಈಚೆಗೆ ಬೆಂಗಳೂರಿನಲ್ಲಿ ನಡೆದ ಅಮ್ನೆಸ್ಟಿ ಕಾರ್ಯಕ್ರಮದಲ್ಲಿ ದೇಶದ್ರೋಹಿ ಘೋಷಣೆ ಕೂಗಿದ ದುಷ್ಟಶಕ್ತಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಬುಧವಾರ ಎಬಿವಿಪಿ ತಾಲ್ಲೂಕು ಘಟಕದ ಕಾರ್ಯಕರ್ತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ದೇಶದ್ರೋಹಿ ಕೆಲಸ ಮಾಡಿ, ಸಾಮರಸ್ಯ ಬದುಕಿಗೆ ಧಕ್ಕೆ ಉಂಟು ಮಾಡುವ ದುಷ್ಟಶಕ್ತಿಗಳನ್ನು ಸರ್ಕಾರ ಮಟ್ಟ ಹಾಕಬೇಕು.

ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ವ್ಯಕ್ತಿಗಳನ್ನು ಗಡಿಪಾರು ಮಾಡಬೇಕು ಎಂದು ಎಬಿವಿಪಿ ಸಂಘಟನೆಯ ಮುಖಂಡ ಅರವಿಂದ ಉಪ್ಪಿನ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಅವಿನಾಶ ಗುತ್ತೆದಾರ, ಕಿರಣಕುಮಾರ ತುಂಗೆ, ಮಲ್ಲಿಕಾರ್ಜುನ ಜಾಕಾ, ಭೀಮು ಚಕ್ರವರ್ತಿ, ಸಾಗರ ಹೊತಪೇಟ, ರಮೇಶ ಪಾಣಿಭಾತೆ,
ಮರಿಲಿಂಗ ದೊಡಮನಿ, ಶ್ರೀಶೈಲ್ ಹೊಸ್ಮನಿ, ಬಸವರಾಜ ಅಂಗಡಿ, ಶಶಿಕುಮಾರ ಸೇರಿದಂತೆ ಇನ್ನು ಅನೇಕರು ಇದ್ದರು.

ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ. ಶಾಂತಿ ಕದಡುವ ಪ್ರಯತ್ನ ಮಾಡುತ್ತಿರುವ ದೇಶದ್ರೋಹಿಗಳನ್ನು ಬಂಧಿಸಿ. ಪೊಲೀಸರು ವಿದ್ಯಾರ್ಥಿಗಳಿಗೆ ಹೊಡೆಯುವುದನ್ನು ನಿಲ್ಲಿಸಲಿ.
–ನಿತೇಶ ಎಂ., ರಾಜ್ಯಕಾರ್ಯಕಾರಣಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.