ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಬಿರುಗಾಳಿ ಸಹಿತ ಮಳೆಗೆ ಧರೆಗೆ ಉರುಳಿದ ಮರಗಳು

Published 9 ಮೇ 2024, 5:40 IST
Last Updated 9 ಮೇ 2024, 5:40 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗೆ ಉದುರಿ ಬಿದ್ದಿವೆ. ಇದರಿಂದ ರಸ್ತೆಯಲ್ಲಿ ಪ್ರಯಾಣಿಕರು ಪರದಾಡಿದರು‌.

ನಗರದಲ್ಲಿ ಮಧ್ಯರಾತ್ರಿ ಸುಮಾರು 1 ಗಂಟೆಗೆ ಸುರಿದ ಮಳೆಗೆ ಅಲ್ಲಲ್ಲಿ ಮರಗಳು ರಸ್ತೆಗೆ ಬಿದ್ದಿವೆ.

ನಗರದ ರೈಲ್ವೆ ಸ್ಟೇಷನ್‌ಗೆ ತೆರಳುವ ಮಾರ್ಗದ ಅರಣ್ಯ ಇಲಾಖೆಯ ಕಾಂಪೌಂಡ್‌ನಲ್ಲಿ ಇದ್ದ ಭಾರಿ ಗಾತ್ರದ ಮರ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಇದರಿಂದಾಗಿ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸಬೇಕಾಯಿತು.

ಭಾರಿ ಬಿರುಗಾಳಿ, ಗುಡುಗು ಸಹಿತ ಮಳೆಗೆ ಗ್ರಾಮೀಣ ಭಾಗದಲ್ಲಿ ಪತ್ರಾಸ್‌ಗಳು ಹಾರಿವೆ.

ವಡಗೇರಾ ತಾಲ್ಲೂಕಿನ ನಾಯ್ಕಲ್ ಮತ್ತು ಗುರುಸಣಗಿ‌ ಕ್ರಾಸ್‌ ಬಳಿ‌ ಮರಗಳು ಬಿದ್ದಿವೆ.

ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು‍, ತಂಪಿನ ವಾತಾವರಣ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT