ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶವವಿಟ್ಟು ಕೋಲಿ ಸಮಾಜ ಪ್ರತಿಭಟನೆ

Last Updated 10 ನವೆಂಬರ್ 2017, 10:25 IST
ಅಕ್ಷರ ಗಾತ್ರ

ಶಹಾಪುರ: ಹಣಕಾಸಿನ ವಿಷಯದಲ್ಲಿ ಉಂಟಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲ್ಲೂಕಿನ ಮಹಲರೋಜಾ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಣಮಂತರಾಯ ಹೊನ್ನಪ್ಪ ನಾಯ್ಕೋಡಿ ಅಲಿಯಾಸ್ ಪೂಜಾರಿ(58) ಕೊಲೆಯಾದವರು. ನಿಂಗಪ್ಪ ಭೀಮರಾಯ ಕೊಂಗಡಿ ಕೊಲೆ ಆರೋಪಿ.

‘ಬೆಳಿಗ್ಗೆ 7ರ ಸುಮಾರಿಗೆ ಹಣಮಂತರಾಯ ಹೊಲಕ್ಕೆ ಹೋಗಿ ಮರಳಿ ಮನೆಗೆ ಬರುತ್ತಿರುವಾಗ ಅದೇ ಗ್ರಾಮದ ಆರೋಪಿ ನಿಂಗಪ್ಪ ಮಚ್ಚಿನಿಂದ ಮುಖ, ತಲೆಗೆ ಹೊಡೆದು ಗಾಯಗೊಳಿಸಿದ. ರಕ್ತದ ಮಡುವಿನಲ್ಲಿ ಬಿದ್ದ ಹಣಮಂತರಾಯ ಅವರನ್ನು ಶಹಾಪುರ ಆಸ್ಪತ್ರೆಗೆ ತಕ್ಷಣವೇ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದರು’ ಎಂದು ಗೋಗಿ ಠಾಣೆಯ ಪಿಎಸ್‌ಐ ಕೃಷ್ಣಾ ಸುಬೇದಾರ ತಿಳಿಸಿದ್ದಾರೆ.

ಕೊಲೆ ವಿಷಯ ತಿಳಿಯುತ್ತಿದ್ದಂತೆಯೇ ಕೋಲಿ ಸಮಾಜದ ಮುಖಂಡರು ಮತ್ತು ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ತಡೆಗಟ್ಟಿ, ಶವವನ್ನು ಹೊರ ತೆಗೆದು ಪ್ರತಿಭಟನೆ ನಡೆಸಿದರು.

ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡರು. ಪೊಲೀಸ್‌ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ನಂತರ ಶವವನ್ನು ಸರ್ಕಾರಿ ಒಯ್ದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಪ್ರತಿಭಟನಾ ಸ್ಥಳಕ್ಕೆ ಬಂದು ಚರ್ಚಿಸಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು. ನಂತರ ಗ್ರಾಮಕ್ಕೂ ಭೇಟಿ ನೀಡಿ ನೀಡಿ, ಪರಿಶೀಲಿಸಿದರು. ಎಲ್ಲರೂ ಶಾಂತತೆ ಕಾಪಾಡಬೇಕು. ಅಹಿತಕರ ವಾತಾವರಣಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT