ಶಹಾಪುರ: ‘ಗ್ರಾಮೀಣ ಪ್ರದೇಶದಲ್ಲಿ ಅಗತ್ಯವಾದ ಕುಡಿಯುವ ನೀರು, ಒಳಚರಂಡಿ ನಿರ್ಮಾಣ, ರಸ್ತೆ ಇನ್ನಿತರ ಕಾಮಗಾರಿಗಳನ್ನು ನಿರ್ವಹಿಸುವುದು ನನ್ನ ಮೊದಲ ಆದ್ಯತೆ’ ಎಂದು ಶಾಸಕ ಡಾ.ಎ.ಬಿ. ಮಾಲಕರಡ್ಡಿ ಹೇಳಿದರು.

ಶಹಾಪುರ ತಾಲ್ಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಶಹಾಪುರ ತಾಲ್ಲೂಕಿನ ಹುರಸಗುಂಡಗಿ ಗ್ರಾಮವು ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದೆ. ಗ್ರಾಮದಲ್ಲಿ ಚರಂಡಿ ನಿರ್ಮಾಣಕ್ಕೆ ₹ 5.70 ಕೋಟಿ, ಸನ್ನತಿ ಬ್ರಿಜ್ ಕಂ ಬ್ಯಾರೇಜಿನಿಂದ ₹ 3.54ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹ 15 ಲಕ್ಷ ಮತ್ತು ಶುದ್ಧ ಕುಡಿಯುವ ನೀರಿನ ಘಟಕಕ್ಕೆ ₹10 ಲಕ್ಷ ವೆಚ್ಚದಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ’ ಎಂದರು.

ತಾಪಂ ಸದಸ್ಯೆ ಸಿದ್ದಮ್ಮ, ಭೀಮರಾಯ ಬಾರಿಗಿಡ, ನಿಜಗುಣ ದೋರನಹಳ್ಳಿ, ಭೀಮಾಶಂಕರ ಅಣಬಿ, ಪರಮೇಶ್ವರ ನಾಯ್ಕಲ್, ಬಸವರಾಜ ಬಾರಿಗಿಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.