ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೊಸ ಬಸ್ ನಿಲ್ದಾಣಕ್ಕೆ ಸೌಲಭ್ಯ ಒದಗಿಸಿ’

Last Updated 13 ಸೆಪ್ಟೆಂಬರ್ 2017, 7:31 IST
ಅಕ್ಷರ ಗಾತ್ರ

ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಮಂಗಳವಾರ ಬೀದರ್‌ –ಶ್ರೀರಂಗಪಟ್ಟಣದ ಹೆದ್ದಾರಿಯಲ್ಲಿ ಎಸ್‌ಡಿಪಿಐ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಶಹಾಪುರ:ಆರು ವರ್ಷದ ಹಿಂದೆ ₹ 3ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಬಸ್ ನಿಲ್ದಾಣದಲ್ಲಿ ಕುಡಿವ ನೀರು ಹಾಗೂ ಮೂಲಸೌಕರ್ಯ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ಆರೋಪಿಸಿ ಮಂಗಳವಾರ ಸೋಷಿಯಲ್ ಡೆಮಾಕ್ರಟಿಕ್‌ ಫ್ರಂಟ್ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.

ಹೊಸ ಬಸ್ ನಿಲ್ದಾಣದಲ್ಲಿ ದೂರದ ಊರಿಗೆ ಪ್ರಯಾಣಿಸುವ ಬಸ್ ಸಹ ನಿಲ್ಲಿಸುವುದಿಲ್ಲ. ಉಪಹಾರ ಗೃಹಕ್ಕೆ ಬೀಗ ಹಾಕಲಾಗಿದೆ. ನಿಲ್ದಾಣದಲ್ಲಿ ಯಾವುದೇ ಭದ್ರತೆ ಇಲ್ಲ, ಕುಡಿಯುವ ಎಸ್‌ಡಿಪಿಐ ಪಕ್ಷದ ಜಿಲ್ಲಾ ಘಟಕದ ಮಹ್ಮದ ಖಾಲಿದ ಆರೋಪಿಸಿದರು.

ಹೊಸ ಬಸ್‌ ನಿಲ್ದಾಣ ನಿರ್ಮಿಸಿದರು, ಸಾರಿಗೆ ಇಲಾಖೆ ಅಧಿಕಾರಿಗಳ ಹಳೇ ನಿಲ್ದಾಣದ ಪ್ರೀತಿ ಹೋಗಿಲ್ಲ. ಬಸ್‌ಗಳು ಹೊಸ ನಿಲ್ದಾಣಕ್ಕೆ ಬರುವ ಬದಲು ಹಳೇ ನಿಲ್ದಾಣದಲ್ಲಿ ನಿಲ್ಲಿಸುತ್ತಾರೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ದಲಿತ ಸಂಘಟನೆಯ ಮುಖಂಡ ಶಿವಪುತ್ರಪ್ಪ ಜವಳಿ, ಎಸ್‌ಎಸ್‌ಡಿ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವ ದಿಗ್ಗಿ, ನಿಂಗಣ್ಣ ಕದರಾಪೂರ, ಅಬ್ದುಲ ಮತಿನ್, ಮಹ್ಮದ ಜಾಕೀರ, ಇಸ್ಮಾಯಿಲ್ ಫಿರೋಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT