ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಖಾತೆಯ ಅಕ್ರಮ ಮುಚ್ಚಿಹಾಕಲು ಅದೇ ಖಾತೆಗೆ ಪಟ್ಟು: ಡಿಕೆಶಿ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

Last Updated 5 ಜೂನ್ 2018, 7:23 IST
ಅಕ್ಷರ ಗಾತ್ರ

ಮಂಗಳೂರು: ‘ರಾಜ್ಯದಲ್ಲಿ ಅತ್ಯಂತ ಕೆಟ್ಟದಾಗಿ ಇಂಧನ ಖಾತೆ ನಿರ್ವಹಿಸಿದ ಕೀರ್ತಿ ಹಿಂದಿನ ಕಾಂಗ್ರೆಸ್ ಸರ್ಕಾರದ್ದು. ಈ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಮುಚ್ಚಿಹಾಕಲು ಆಗಿನ ಇಂಧನ ಸಚಿವರು ಅದೇ ಖಾತೆಗೆ ಪಟ್ಟು ಹಿಡಿದಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನಗಿಂತ ಹಿಂದೆ ಇಂಧನ ಸಚಿವರಾಗಿದ್ದವರು ಹೇಗೆ ಆ ಖಾತೆ ನಿರ್ವಹಿಸಿದ್ದರು ಎಂಬುದು ನನಗೆ ಗೊತ್ತಿದೆ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಇಂಧನ ಖಾತೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ’ ಎಂದರು.

ಹೊಸಬರು ಇಂಧನ ಖಾತೆ ಸಚಿವರಾದರೆ ಅಕ್ರಮಗಳನ್ನು ಪತ್ತೆ ಮಾಡಬಹುದು ಎಂಬ ಭಯ ಹಿಂದಿನ ಸಚಿವರಿಗೆ ಇದೆ. ಈ ಕಾರಣಕ್ಕಾಗಿಯೇ ಇಂಧನ ಖಾತೆಗೆ ಪಟ್ಟು ಹಿಡಿದಿದ್ದಾರೆ. ಜನರು ಸತ್ತರೂ ಇವರು ಖಾತೆಗಾಗಿ ಹೊಡೆದಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ವಿದೇಶದಿಂದ ಕಪ್ಪು ಹಣ ವಾಪಸ್ ತರುವುದು ಮತ್ತು ಗಂಗಾನದಿ ಶುದ್ಧೀಕರಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಆದರೆ, ಮಾಹಿತಿ ಕೊರತೆಯಿಂದ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT