ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಾದ ಪರೀಕ್ಷೆ ಕಡ್ಡಾಯಕ್ಕೆ ಯಡಿಯೂರಪ್ಪ ಆಕ್ಷೇಪ

Last Updated 18 ಡಿಸೆಂಬರ್ 2018, 12:56 IST
ಅಕ್ಷರ ಗಾತ್ರ

ಶಿವಮೊಗ್ಗ: ಧಾರ್ಮಿಕ ದತ್ತಿ ಇಲಾಖೆ ಅಧೀನದ ದೇವಸ್ಥಾನಗಳಲ್ಲಿ ಪ್ರಸಾದ ಪರೀಕ್ಷೆ ಕಡ್ಡಾಯಗೊಳಿಸಿರುವ ಕ್ರಮ ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದರು.

ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಚಾಮರಾಜನಗರ ಜಿಲ್ಲೆ ಸುಳ್ವಾಡಿ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿದವರಿಗೆ ಶಿಕ್ಷೆಯಾಗಬೇಕು. ಒಂದು ಘಟನೆ ಮುಂದಿಟ್ಟುಕೊಂಡು ಎಲ್ಲ ದೇವಸ್ಥಾನಗಳಿಗೂ ನಿರ್ಬಂಧ ವಿಧಿಸುವುದು ಸಲ್ಲದು ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ ಯೋಜನೆಗಳ ಕುರಿತು ಸದನದಲ್ಲಿ ವಿಸ್ತೃತ ಚರ್ಚೆಯಾಗಬೇಕು. ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಕಾಲಹರಣ ಮಾಡುತ್ತಿದೆ. ರೈತರ ಆತ್ಮಹತ್ಯೆ ಪ್ರಕರಣ ಮುಂದುವರಿದಿವೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಋಣಮುಕ್ತ ಪತ್ರ ನೀಡಲು ಹಿಂದೇಟು ಹಾಕುತ್ತಿವೆ. ಇಂತಹ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT