ಶುಕ್ರವಾರ, ಏಪ್ರಿಲ್ 3, 2020
19 °C

ಹಬ್ಬಕ್ಕೆ ಕರೆಯಲು ಹೋದವರು ಮಸಣ ಸೇರಿದರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಿವಮೊಗ್ಗ: ನಗರದಲ್ಲಿ ಫೆ.25ರಿಂದ ಆರಂಭವಾಗುವ ಮಾರಿಕಾಂಬ ಜಾತ್ರೆಗೆ ಬಂಧುಗಳನ್ನು ಕರೆಯಲು ಹೋಗಿದ್ದ ಯುವಕರು ಸೋಮವಾರ ಸಂಜೆ ಲಕ್ಕವಳ್ಳಿ–ಬಿಆರ್‌ಪಿ ಸಮೀಪ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.  

ಶಿವಮೊಗ್ಗದ ನವುಲೆಯ ಮೋಹನ್‌, ಕುಮಾರ್ ಮೃತ ಯುವಕರು. ಬೈಕ್‌ನಲ್ಲಿ ತೆರಳುತ್ತಿದ್ದ ಅವರು ಎದುರಿಗೆ ಬರುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಹುಣಸವಳ್ಳಿ ಸಮೀಪ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದರು. ಇಬ್ಬರು ಹೆಲ್ಮೆಟ್ ಧರಿಸಿರಲಿಲ್ಲ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆಯಿತು. ಅಫಘಾತದಲ್ಲಿ ದೇಹಗಳು ಛಿದ್ರವಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದರು. 

ಪ್ರತಿಭಟನೆ: ಯುವಕರ ಸಾವಿಗೆ ಪೊಲೀಸರೇ ಕಾರಣ. ದಂಡದ ಭೀತಿಯಿಂದ ತಪ್ಪಿಸಿಕೊಳ್ಳಲು ಹೋಗಿ ಇಂತಹ ಅವಘಡ ನಡೆದಿದೆ ಎಂದು ಆರೋಪಿಸಿ ಸ್ಥಳೀಯರು ಲಕ್ಕವಳ್ಳಿ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು