ಶನಿವಾರ, ಫೆಬ್ರವರಿ 27, 2021
23 °C

ಶಾಲೆ ಊಟ ಸವಿದ ಜಿಪಂ ಉಪಾಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೀಣಾ ಚಂದ್ರು ಅವರು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸೋಮವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶಿಲನೆ ನಡೆಸಿದರು.

ವಿದ್ಯಾರ್ಥಿನಿಯರಿಗೆ ಊಟ ಬಡಿಸಿ ಅವರ ಜೊತೆ ಚರ್ಚೆ ನಡೆಸಿದರು. ಮಧ್ಯಾಹ್ನ ಊಟದ ಸಮಯದಲ್ಲಿ ಶಾಲೆಗೆ ಭೇಟಿ ನೀಡಿದ ಅವರು, ತಯಾರಾದ ಬಿಸಿಯೂಟದ ಗುಣಮಟ್ಟವನ್ನು ಪರೀಕ್ಷಿಸಿದರು. ನಂತರ ತಾವೂ ಸೇವಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಸಿಯೂಟದ ಗುಣಮಟ್ಟದ ಬಗ್ಗೆ ಹಾಗೂ ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡಿದರು.

ಬಿಸಿಯೂಟ ಹಾಗೂ ಶಾಲೆಯಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದಾಗ ಉಪ ಪ್ರಾಂಶುಪಾಲ ವೀರಭದ್ರಯ್ಯ ಹಾಗೂ ಶಿಕ್ಷಕರನ್ನು ಅವರು ಅಭಿನಂದಿಸಿದರು. ಜತೆಯಲ್ಲಿದ್ದ ಬೇವೂರು ಜಿಲ್ಲಾ ಪಂಚಾಯಿತಿ ಸದಸ್ಯೆ ಸುಗುಣ ತಿಮ್ಮಪ್ಪ ಅವರೂ ಊಟ ಸೇವಿಸಿ ಮೆಚ್ಚುಗೆ ಸೂಚಿಸಿದರು.

ವಿದ್ಯಾರ್ಥಿನಿಯರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇದೆ. ಕೆಲವು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ. ಇದರಿಂದ ಕಾಲೇಜಿನ ಆವರಣದಲ್ಲಿರುವ ಕೊಳವೆ ಬಾವಿಯ ನೀರು ಸೇವಿಸುವಂತಾಗಿದೆ. ಇದರ ಬಗ್ಗೆ ಗಮನ ಹರಿಸಲು ಮಕ್ಕಳು ಮನವಿ ಮಾಡಿದರು.

ಶೀಘ್ರವೇ ಇದನ್ನು ರಿಪೇರಿ ಮಾಡುವಂತೆ ಕ್ರಮ ಕೈಗೊಳ್ಳಲು ಸಂಬಂಧಿಸಿದವರ ಜೊತೆ ಮಾತನಾಡುವುದಾಗಿ ಉಪಾಧ್ಯಕ್ಷೆ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳ ಮನವಿ ಮೇರೆಗೆ ರೋಗಿಗಳ ಪೋಷಕರು ಆಹಾರ ಸೇವಿಸಲು ಬೇಕಾದ ಶೆಡ್ ನಿರ್ಮಾಣ ಮಾಡಲು ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ನೀಡಲಾಗಿದೆ. ಅದೆ ರೀತಿ ಬಾಲಕಿಯರ ಕಾಲೇಜಿನ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.