ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಆಮದಿಗೆ ಚಿಂತನೆ: ಸಿಎಂ

Last Updated 22 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ರಾಯಚೂರು:  ಕೇಂದ್ರ ಸರ್ಕಾರವು ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ಕಲ್ಲಿದ್ದಲು ಪೂರೈಕೆಗೆ ಅಸಹಕಾರ ಮುಂದುವರಿಸಿದರೆ ವಿದೇಶದಿಂದ ಕಲ್ಲಿದ್ದಲು ತರಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದ ಹಳೆಯದಾಗಿದೆ. ಇದರಲ್ಲಿ ಮೇಲಿಂದ ಮೇಲೆ ತಾಂತ್ರಿಕ ದೋಷ ಕಂಡುಬರುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರದಿಂದಾಗಿ ಕಲ್ಲಿದ್ದಲು ಪೂರೈಕೆಯಲ್ಲಿ ತೊಂದರೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

ರಸ್ತೆ ಸುಧಾರಣೆಗೆ 1100 ಕೋಟಿ:  ಸುವರ್ಣ ಗ್ರಾಮ ಯೋಜನೆ ಹಾಗೂ ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಲು ರಾಜ್ಯ ಸರ್ಕಾರ 1100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೂರು ತಿಂಗಳಲ್ಲಿ ರಾಜ್ಯದ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT