ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಭಾಗದ ಪ್ರಗತಿಗೆ ಬಿಜೆಪಿ ಬೆಂಬಲಿಸಿ

Last Updated 21 ಡಿಸೆಂಬರ್ 2010, 9:45 IST
ಅಕ್ಷರ ಗಾತ್ರ

ಹಟ್ಟಿ ಚಿನ್ನದ ಗಣಿ: ಸಮಗ್ರ ಗ್ರಾಮೀಣ ಭಾಗಗಳ ಅಭಿವೃದ್ಧಿಗಾಗಿ ಚುನಾವಣಿಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಅವರು ಹಟ್ಟಿಯಲ್ಲಿ ಸೋಮವಾರದಂದು ಜಿ.ಪಂ, ತಾ.ಪಂ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡುತ್ತ, ರಾಜ್ಯದಲ್ಲಿ ನಮ್ಮ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ನಾನು ಮಂತ್ರಿಯಾದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

ರಾಯಚೂರು ಜಿಲ್ಲೆಯನ್ನು ಹಿಂದುಳಿದ ಪಟ್ಟಿಯಿಂದ ತೆಗೆದುಹಾಕಿ ಸಮಗ್ರ ಅಭಿವೃದ್ಧಿ ಮಾಡುವುದೇ ನನ್ನ ಉದ್ದೇಶ. ಅದಕ್ಕಾಗಿ ತಾವೆಲ್ಲರೂ ಖಂಡಿತವಾಗಿ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಹೇಳಿದರು.

ಹಟ್ಟಿಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಚುನಾವಣೆಯ ನಂತರ 16 ಕೋಟಿ ವೆಚ್ಚದಲ್ಲಿ ಯೋಜನೆಯೊಂದನ್ನು ಆರಂಭಿಸಿ ಪರಿಹರಿಸುತ್ತೇನೆ. ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಗೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಉಡುಗೊರೆ ಕೊಡಿಸುವ ಪ್ರಯತ್ನ ಮಾಡುತ್ತೇನೆಂದು ನುಡಿದರು.

ಮಾಜಿ ಸಚಿವ ಅಮರೇಶ ನಾಯಕ ಅಧ್ಯಕ್ಷತೆ ವಹಿಸಿದ್ದರು. ಸಂಸದ ಸಣ್ಣ ಫಕೀರಪ್ಪ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಜಿ.ಪಂ ಅಭ್ಯರ್ಥಿ ಶಂಕರಗೌಡ ಅಮರಾವತಿ ಮಾತನಾಡಿದರು.

ವೇದಿಕೆಯ ಮೇಲೆ ತಾ.ಪಂ ಅಭ್ಯರ್ಥಿ ಜಾಕೀರಾ, ಸಿದ್ದು ಬಂಡಿ, ಶಿವಾನಂದ ಐದನಾಳ, ಮೋಹನ ಹೊಸಮನಿ, ವಾಲೇಬಾಬು, ಶಿವಪುತ್ರ, ಕೆ.ಮೌನೇಶ, ಜೋಷಿ, ಹನುಮಂತಪ್ಪ ಕಂದಗಲ್, ಕೋಠಾ ಅಭ್ಯರ್ಥಿ ಸಗರಪ್ಪ, ಗೌಡೂರು ದುರುಗಮ್ಮ, ರತ್ನ ಅಂಗಡಿ, ದಾಸಪ್ಪಗೌಡ, ಲಿಂಗಣ್ಣ ತಬಲಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿಜಯಕುಮಾರ ಸಜ್ಜನ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT