ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಕಳೆ ತಂದ ತುಂತುರು ಮಳೆ

Last Updated 19 ಜುಲೈ 2017, 6:21 IST
ಅಕ್ಷರ ಗಾತ್ರ

ಕಲಬುರ್ಗಿ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಉತ್ತಮವಾಗಿ ಮಳೆ ಆಯಿತು. ವಾರದಿಂದ ಮಳೆ ಬಿಡುವು ನೀಡಿದ್ದರಿಂದ ನಗರದ ಜನತೆ ಸೆಖೆ ಅನುಭವಿಸುವಂತಾಗಿತ್ತು. 2–3 ದಿನಗಳಿಂದ ಮೋಡ ಮುಸುಕಿದ ವಾತಾವರಣ ಕಂಡು ಬಂದರೂ ಮಳೆಯಾಗಿರಲಿಲ್ಲ. ಮಂಗಳವಾರ ಸುರಿದ ಬಿರುಸು ಮಳೆಯಿಂದ ಜನತೆ ನಿರಾಳರಾದರು.

ಸಾಯಂಕಾಲ ಶಾಲಾ–ಕಾಲೇಜು ವಿದ್ಯಾರ್ಥಿಗಳು, ನೌಕರರು ಮಳೆಯಲ್ಲೇ ಮನೆಯತ್ತ ಸಾಗುತ್ತಿದ್ದ ದೃಶ್ಯ ಕಂಡು ಬಂತು. ಸೂಪರ್ ಮಾರ್ಕೆಟ್‌ ಮತ್ತು ಕಣ್ಣಿ ಮಾರ್ಕೆಟ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ತೊಂದರೆ ಪರದಾಡುವಂತಾಯಿತು.

ಇಲ್ಲಿನ ಹಳೆ ಜೇವರ್ಗಿ ರಸ್ತೆಯ ರೈಲ್ವೆ ಕೆಳಸೇತುವೆ ಬಳಿ ಮಳೆ ನೀರು ನುಗ್ಗಿದ ಪರಿಣಾಮ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯವಸ್ತಗೊಂಡಿತ್ತು. ರಾಘವೇಂದ್ರ ನಗರ ಮತ್ತು
ಲಾಲ್‌ಗೇರಿ ಕ್ರಾಸ್ ಬಳಿ ಚರಂಡಿಗಳು ತುಂಬಿ ಹರಿದ ಪರಿಣಾಮ ಪಾದಚಾರಿಗಳು ತೊಂದರೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT