ಬೇಲೂರು: ತಾಲ್ಲೂಕು ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್‌ನ ಕಮಲ ಚನ್ನಪ್ಪ ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್‌ನ ಜೆ.ಸಿ.ಮೋಹನ್‌ಕುಮಾರ್ ಆಯ್ಕೆಯಾದರು.

ಬಿಸಿಎಂ(ಎ) ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ಕಮಲ ಚನ್ನಪ್ಪ, ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ಜೆ.ಸಿ.ಮೋಹನ್‌ಕುಮಾರ್ ಮತ್ತು ಬಿಜೆಪಿಯ ಶೇಖರಯ್ಯ ನಾಮಪತ್ರ ಸಲ್ಲಿಸಿದ್ದರು.ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೋಹನ್‌ಕುಮಾರ್ 10 ಮತಗಳನ್ನು ಪಡೆದರೆ, ಬಿಜೆಪಿಯ ಶೇಖರಯ್ಯ 7 ಮತ ಪಡೆದರು.

17 ಸ್ಥಾನಗಳಿರುವ ತಾ.ಪಂನಲ್ಲಿ ಜೆಡಿಎಸ್ ಮತ್ತು ಬಿಜೆಪಿ ತಲಾ 7 ಸ್ಥಾನ ಮತ್ತು ಕಾಂಗ್ರೆಸ್ ಮೂರು ಸ್ಥಾನ ಗಳಿಸಿದ್ದವು. ಇದರಿಂದ ತಾ.ಪಂ.ನಲ್ಲಿ ಅತಂತ್ರ ಸ್ಥಿತಿ ಏರ್ಪಟ್ಟಿತ್ತು. ಬಿಜೆಪಿ ಕಾಂಗ್ರೆಸ್‌ನ ಬೆಂಬಲದಿಂದ ಅಧಿಕಾರ ಹಿಡಿಯಲು ಪ್ರಯತ್ನಿಸಿತ್ತಾದರೂ ಪ್ರಯೋಜನವಾಗಲಿಲ್ಲ. ಕಾಂಗ್ರೆಸ್ ಸದಸ್ಯರು ಜೆಡಿಎಸ್‌ನ್ನು ಬೆಂಬಲಿಸಿದರು.‘ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆಂಬಲಿಸುವ ಮೂಲಕ ಜಾತ್ಯತೀತ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದೆ’ ಎಂದು ಜೆಡಿಎಸ್ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.