ತುಮಕೂರು: ನಗರಸಭೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಕಂಪ್ಯೂಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.ಶೇ 22.75ರ ಮುಕ್ತ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉಚಿತವಾಗಿ ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದೆ.

ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯದೆ ಈ ಕಂಪ್ಯೂಟರ್‌ಗಳನ್ನು ಖರೀದಿಸಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಈ ಕಂಪ್ಯೂಟರ್ ಅನ್ನು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡಿ ಖರೀದಿಸಿದಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

48 ಕಂಪ್ಯೂಟರ್‌ಗಳನ್ನು ಈಗಾಗಲೇ ಕೊಂಡುಕೊಳ್ಳಲಾಗಿದ್ದು, ಬುಧವಾರ ನಡೆಯುವ ಸಾಮಾನ್ಯ ಸಭೆಯಲ್ಲಿ ಈ ಖರೀದಿಗೆ ಘಟನೋತ್ತರ ಮಂಜುರಾತಿ ಪಡೆಯಲು ಸಿದ್ಧತೆ ನಡೆಸಲಾಗಿದೆ ಎಂದು ನಗರಸಭೆ ಮೂಲಗಳು ತಿಳಿಸಿವೆ.

2010-11ನೇ ಸಾಲಿನ ಶೇ 22.75ರ ಮುಕ್ತ ನಿಧಿಯಲ್ಲಿ ಈ ಕಂಪ್ಯೂಟರ್‌ಗಳನ್ನು ಟೆಂಡರ್ ಮೂಲಕವೇ ಖರೀದಿಸಲಾಗಿದೆ. ಮೂರು ಸಂಸ್ಥೆಗಳು ಟೆಂಡರ್‌ನಲ್ಲಿ ಭಾಗವಹಿಸಿದ್ದು, ಕಡಿಮೆ ದರ ನಮೂದಿಸಿದ ಸಂಸ್ಥೆಗೆ ಟೆಂಡರ್ ನೀಡಲಾಗಿದೆ. ಆದರೆ ವಾಸ್ತವಾಗಿ ಈ ಕಂಪ್ಯೂಟರ್ ಎಂಆರ್‌ಪಿ ಬೆಲೆಗಿಂತ 8318 ರೂಪಾಯಿ ಹೆಚ್ಚಿಗೆ ತೆತ್ತು ಖರೀದಿಸಲಾಗಿದೆ. ಮಾರುಕಟ್ಟೆಯಲ್ಲಿ ಈ ಕಂಪ್ಯೂಟರ್ ಒಂದರ ಬೆಲೆ ರೂ. 24682 ಇದ್ದರೂ ರೂ. 32990 ರೂಪಾಯಿ ಪಾವತಿಸಲಾಗಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.