ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಯಾತ್ರೆ ನಡೆಸಿ ಮತ ಯಾಚನೆ

Last Updated 10 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಕೊಪ್ಪಳ:ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ್ ನಗರದ ವಿವಿಧೆಡೆ ಶನಿವಾರ ಪಾದಯಾತ್ರೆ ಮೂಲಕ ಮತ ಯಾಚಿಸಿದರು.ನಗರದ ಕಾತರಕಿ ರಸ್ತೆ, ಸಿರಸಪ್ಪಯ್ಯನ ಮಠ, ನಿರ್ಮಿತಿ ಕೇಂದ್ರ, ಮಹಿಬೂಬ ನಗರ, ಪಂಡರಪೋಳ, ಶ್ರೀಶೈಲ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸಿ ಮತದಾರರನ್ನು ಭೇಟಿ ಮಾಡಿದ ಅವರು, ತಮ್ಮನ್ನು ಬೆಂಬಲಿಸಿ ಆರಿಸಿ ತರುವಂತೆ ಮನವಿ ಮಾಡಿದರು.

ಕೆಲವೆಡೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರವು ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ತಕ್ಕ ಪಾಠ ಕಲಿಸುವಂತೆ ಕೋರಿದರು.
ಪಕ್ಷವು ಬಡವರು ಹಾಗೂ ತುಳಿತಕ್ಕೆ ಒಳಗಾದವರ ಏಳಿಗೆಗೆ ಶ್ರಮಿಸಿದೆ ಎಂದರು.

ಅಲ್ಲದೇ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ತಮಗೆ ಮತ ನೀಡುವಂತೆ ಮನವಿ ಮಾಡಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ನಗರ ಘಟಕದ ಅಧ್ಯಕ್ಷ ಮರ್ದಾನಲಿಸಾಬ ಅಡ್ಡೇವಾಲೆ, ನಗರಸಭೆಯ ಉಪಾಧ್ಯಕ್ಷ ಅಮ್ಜದ್ ಪಟೇಲ್, ಸದಸ್ಯರಾದ ಜಾಕೀರ್ ಹುಸೇನ್ ಕಿಲ್ಲೇದಾರ, ಮಾನ್ವಿ ಪಾಷಾ, ಇಂದಿರಾ ಭಾವಿಕಟ್ಟಿ, ಹಲೀಮಾಬಿ, ಸುಮಾ ಕಟ್ಟಿಮನಿ, ಸಿದ್ದು ಮ್ಯಾಗೇರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಲ್.ಹಿರೇಗೌಡ್ರ, ಮುಖಂಡರಾದ ಗವಿಸಿದ್ದಪ್ಪ ಕಂದಾರಿ, ಜುಲ್ಲು ಖಾದರಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT