ಬೀದರ್: ಜಿಲ್ಲೆಯ ಐದೂ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ಪರಿಹಾರ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಶನಿವಾರ ಪ್ರತಿಭಟನಾ ರ‌್ಯಾಲಿ ನಡೆಸಿತು.

ನಗರದ ಅಕ್ಕಮಹಾದೇವಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‌್ಯಾಲಿ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಬೆಳೆ ಹಾನಿಗೀಡಾದ ರೈತರಿಗೆ ಎಕರೆಗೆ 10 ಸಾವಿರ ರೂಪಾಯಿ ಪರಿಹಾರ ಒದಗಿಸಬೇಕು. ಬೆಳೆ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು ಎಂದು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಹಿಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಮಳೆ ಬಾರದ ಕಾರಣ ಐದೂ ತಾಲ್ಲೂಕುಗಳು ಬರಪೀಡಿತ ಆಗಿದ್ದರೂ ಚರ್ಚೆ ನಡೆಸುವುದಕ್ಕಾಗಿ ಉಸ್ತುವಾರಿ ಸಚಿವರು ಸಭೆ ಕರೆದಿಲ್ಲ ಎಂದು ಆಪಾದಿಸಿದ್ದಾರೆ.

ನಿತ್ಯ ಕನಿಷ್ಠ 8 ಗಂಟೆ 3 ಫೇಸ್ ಹಾಗೂ 15 ಗಂಟೆ ಸಿಂಗಲ್ ಫೇಸ್ ವಿದ್ಯುತ್ ಕೊಡಬೇಕು. ಸುಟ್ಟಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಂಸದ ನರಸಿಂಗರಾವ ಸೂರ್ಯವಂಶಿ, ಶಾಸಕರಾದ ರಹೀಮ್‌ಖಾನ್, ಕಾಜಿ ಅರ್ಷದ್ ಅಲಿ, ಮಾಜಿ ಶಾಸಕ ಕೆ. ಪುಂಡಲಿಕರಾವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ ಅರಳಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆನಂದ ದೇವಪ್ಪ, ಜಿ.ಪಂ. ಮಾಜಿ ಸದಸ್ಯರು, ಇತರ ಪ್ರಮುಖರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.