ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಪಾಸ್ ದರ ಹೆಚ್ಚಳ: ಪ್ರತಿಭಟನೆ

Last Updated 17 ಜೂನ್ 2011, 19:30 IST
ಅಕ್ಷರ ಗಾತ್ರ

ಕೊಪ್ಪಳ: ವಿದ್ಯಾರ್ಥಿಗಳ ಬಸ್ ಪಾಸ್ ದರ ಹೆಚ್ಚಿಸಿರುವ ಸಾರಿಗೆ ಸಂಸ್ಥೆಯ ಕ್ರಮವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್.ಎಫ್.ಐ.) ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸಾಹಿತ್ಯ ಭವನದಿಂದ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿದ ಸಂಘಟನೆಯ ಕಾರ್ಯಕರ್ತರು ಧರಣಿ ನಡೆಸಿದರು. ನಂತರ ತಹಸೀಲ್ದಾರ ಮೂಲಕ ಸಾರಿಗೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ದೇಸಾಯಿ  ಬಸ್ ಪಾಸ್ ದರವನ್ನು 100 ರೂಪಾಯಿಗಳಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಅವೈಜ್ಞಾನಿಕ ಸಂಸ್ಕರಣಾ ಶುಲ್ಕವನ್ನು ರ್ದ್ದದುಗೊಳಿಸಬೇಕು, ಎಲ್ಲಾ ಬಸ್‌ಗಳಲ್ಲಿ ಸಂಚರಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದರು. ನಾಗರಾಜ ಬೆಣಕಲ್, ಯಮನೂರು, ಟಿ.ರವಿ, ಜಿ.ಮಾಲತೇಶ, ಪಿ.ಶ್ರೀನಿವಾಸ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT