ಮದ್ದೂರು: ಚಿನ್ನನದೊಡ್ಡಿಯಲ್ಲಿ ವಿದ್ಯುತ್ ತಂತಿ ತುಳಿದಿದ್ದ ಬಾಲಕಿ ಮೇಘನಾ ಗುರುವಾರ ಮೃತಪಟ್ಟ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದ ಸೆಸ್ಕ್ ಉಪವಿಭಾಗ ಕಚೇರಿ ಎದುರು ಶವದೊಂದಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಅಜ್ಜಿಯೊಂದಿಗೆ ಹಿಪ್ಪನೇರಳೆ ಗಿಡ ಕತ್ತರಿಸಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಬಿದ್ದು ಮೇಘನಾ (13) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೇಘನಾ ಗುರುವಾರ ಮೃತಪಟ್ಟರು. ಬಾಲಕಿ ಸಾವಿಗೆ ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದರು.

ಪರಿಹಾರ ನೀಡುವ ಭರವಸೆ ಸಿಕ್ಕಿದ ಪರಿಣಾಮ ಧರಣಿ ಹಿಂದಕ್ಕೆ ಪಡೆದರು. ಪುರಸಭೆ ಮಾಜಿ ಅಧ್ಯಕ್ಷ ಎಂ.ಐ.ಪ್ರವೀಣ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ನಗರಕೆರೆ ಗ್ರಾಪಂ ಅಧ್ಯಕ್ಷ ಎನ್.ಡಿ.ಸಂದೀಪ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.