ದೊಡ್ಡಬಳ್ಳಾಪುರ: ಕಾರ್ಖಾನೆಗಳ ತ್ಯಾಜ್ಯ, ಪ್ಲಾಸ್ಟಿಕ್ ಹಾವಳಿ, ವಿಪರೀತ ಜನಸಂಖ್ಯೆ ನಡುವೆಯೂ ಗ್ರಾಮದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಬಂದಿರುವ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗೆ ಈ ಬಾರಿ ರಾಜ್ಯ ಸರ್ಕಾರ ‘ನೈರ್ಮಲ್ಯ ರತ್ನ ಪ್ರಶಸ್ತಿ’ ನೀಡಿ ಗೌರವಿಸಿದೆ. ಮಾ.19 ರಂದು ವಿಧಾನ ಸೌಧದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಂಚಾಯತ್ ರಾಜ್ ಸಚಿವ ಜಗದೀಶ್ಶೆಟ್ಟರು 2009-10ನೇ ಸಾಲಿನ ನೈರ್ಮಲ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಸ್ವಚ್ಚತೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ಗ್ರಾಮ ಪಂಚಾಯಿತಿ ಎಂಬ ಪ್ರಶಂಸೆಗೆ ಪಾತ್ರವಾಗಿರುವ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 11 ಗ್ರಾಮಗಳಿವೆ. 2446 ಕುಟುಂಬಗಳ, 20 ಸಾವಿರ ಜನ ಸಂಖ್ಯೆಯಿದೆ.ಕಳೆದ ಮೂರು ವರ್ಷಗಳಿಂದ ಸ್ವಚ್ಚತೆಗೆ ಹೆಚ್ಚು ಪ್ರಾಮುಖ್ಯ ನೀಡಿರುವ ಬಾಶೆಟ್ಟಿಹಳ್ಳಿ ವ್ಯಾಪ್ತಿಯ 28 ಕ್ಷೇತ್ರಗಳ ಗ್ರಾಮ ಪಂಚಾಯಿತಿ ಸದಸ್ಯರು, ತಮ್ಮ ಗ್ರಾಮದ ಪ್ರತಿ ಕುಟುಂಬದವರು ಶೌಚಾಲಯವನ್ನು ನಿರ್ಮಿಸಿಕೊಳ್ಳುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ ಪಂಚಾಯಿತಿ ವ್ಯಾಪ್ತಿಯ 11 ಗ್ರಾಮಗಳನ್ನು ಬಯಲು ಮಲ ವಿಸರ್ಜನೆ ಮುಕ್ತವಾಗಿಸಿದ್ದಾರೆ. ಎಲ್ಲೆಂದೆರಲ್ಲಿ ಮನೆಗಳ ಕಸವನ್ನು ಎಸೆಯದೇ ಸೂಕ್ತ ಸ್ಥಳದಲ್ಲೇ ಹಾಕುವಂತೆ ಜಾಗೃತಿ ಮೂಡಿಸಲಾಗಿದೆ.

ಗ್ರಾಮ ಪಂಚಾಯಿತಿ ಕೇಂದ್ರ ಕಚೇರಿ ಹೊಂದಿರುವ ಬಾಶೆಟ್ಟಿಹಳ್ಳಿಯಲ್ಲಿ ಮಾತ್ರ ಪ್ರತಿ ಮನೆಯಿಂದ ಹಸಿ ಕಸ ಹಾಗೂ ಪ್ಲಾಸ್ಟಿಕ್ ಕಸವನ್ನು ಪ್ರತ್ಯೇಕ ಸಂಗ್ರಹಿಸಲಾಗುತ್ತಿದೆ. ಹಸಿ ಕಸದಿಂದ ಎರೆಹುಳು ಗೊಬ್ಬರ ತಯಾರಿಸಲಾಗುತ್ತಿದೆ. ಇದಕ್ಕಾಗಿ ಸ್ವಸಹಾಯ ಸಂಘದ ಮಹಿಳೆಯರನ್ನು ಒಳಗೊಂಡ ಗುಂಪು ರಚಿಸಿ ಮನೆಗಳಿಂದ ಕಸ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ಇದರ ಮೇಲುಸ್ತುವಾರಿಯನ್ನು ಮೈತ್ರಿ ಸರ್ವ ಸೇವಾ ಸಮಿತಿ ವಹಿಸಿಕೊಂಡಿದೆ ಎನ್ನುತ್ತಾರೆ ಸಮಿತಿಯ ಕೆ.ಗುರುದೇವ್.

ದೊಡ್ಡಬಳ್ಳಾಪುರ ನಗರದಲ್ಲಿ ಇನ್ನೂ ಒಳಚರಂಡಿ ಕೆಲಸ ನಡೆಯುತ್ತಿದೆ. ಆದರೆ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ ಒಂದೂವರೆ ವರ್ಷಗಳಿಂದಲೂ ಒಳಚರಂಡಿ ವ್ಯವಸ್ಥೆ ಚಾಲನೆಯಲ್ಲಿದೆ. ಹೀಗಾಗಿಯೇ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ಸಾಧ್ಯವಾಗಿದೆ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಕೆ.ರಮೇಶ್.ಪಂಚಾಯಿತಿಯ ನೈರ್ಮಲ್ಯ ಸಾಧನೆಯನ್ನು ಶ್ಲಾಘಿಸಿ 2008-09ನೇ ಸಾಲಿನಲ್ಲಿ ರಾಷ್ಟ್ರೀಯ ನಿರ್ಮಲ ಪುರಸ್ಕಾರ, ವಿಭಾಗ (9 ಕಂದಾಯ ಜಿಲ್ಲೆಗಳು) ಮಟ್ಟದಲ್ಲಿ ಪ್ರಥಮ ಸ್ಥಾನಕ್ಕಾಗಿ ನೀಡಲಾಗುವ ಸ್ವರ್ಣ ನೈರ್ಮಲ್ಯ ಪ್ರಶಸ್ತಿ, ಜಿಲ್ಲಾ ಮಟ್ಟದಲ್ಲಿ ರಜತ ನೈರ್ಮಲ್ಯ ಹಾಗೂ ತಾಲ್ಲೂಕು ಮಟ್ಟದಲ್ಲಿ ನೈರ್ಮಲ್ಯ ಪ್ರಶಸ್ತಿಗಳನ್ನು ಇದೇ ಗ್ರಾಮ ಪಂಚಾಯಿತಿ ತನ್ನದಾಗಿಸಿಕೊಂಡಿದೆ.

ಜವಳಿ ಪಾರ್ಕ್ ಸೇರಿದಂತೆ ಬಾಶೆಟ್ಟಿಹಳ್ಳಿ ಗ್ರಾಮದ ಸುತ್ತ ನೂರಾರು ಕೈಗಾರಿಕೆಗಳಿವೆ. ಇದರಿಂದಾಗಿ ಕೊಳವೆ ಬಾವಿಗಳಲ್ಲಿ ಬರುವ ನೀರು ಸಹಜವಾಗಿಯೇ ಕಲುಷಿತವಾಗಿದೆ. ಇದರಿಂದ ಬಾಶೆಟ್ಟಿಹಳ್ಳಿ ಗ್ರಾಮಕ್ಕೆ ಮಾತ್ರ ಶುದ್ಧೀಕರಿಸಿದ ನೀರು ನೀಡುವ ಉದ್ದೇಶದಿಂದ 20 ಲಕ್ಷ ರೂಗಳ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ

ಚೌತಿ ವಿಶೇಷ ಪೂಜೆ
ವಿಜಯಪುರ: ಇಲ್ಲಿನ ಬಸವೇಶ್ವರ ಬಡಾವಣೆಯಲ್ಲಿರುವ ಶ್ರೀ ವಿಜಯ ವಿನಾಯಕಸ್ವಾಮಿ ದೇವಾಲಯದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ ವಿಶೇಷ ಅಲಂಕಾರ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.