ಬಳ್ಳಾರಿ: ಮಹಿಳೆಯರು ಸಾಕ್ಷರರಾಗಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ. ಜನಾರ್ದನ ರೆಡ್ಡಿ ಸಲಹೆ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆಗಳ ಆಶ್ರಯದಲ್ಲಿ, ಸ್ಥಳೀಯ ಬಸವ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕುಟುಂಬ, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಒಬ್ಬ ಮಹಿಳೆ ಓದಿದರೆ ಶಾಲೆ ತೆರೆದಂತೆ ಎಂಬ ನಾಣ್ಣುಡಿಯಂತೆ ಇಡೀ ಕುಟುಂಬವೇ ಸಾಕ್ಷರವಾಗುತ್ತದೆ. ಹಾಗಾದಾಗ ಮಾತ್ರ ಜಾಗೃತಿ ಮೂಡಲು ಸಾಧ್ಯ ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ನೀಡಲಾಗಿದ್ದು, ರಾಜಕೀಯ ಕ್ಷೇತ್ರದಲ್ಲಿ ಆದ್ಯತೆ ನೀಡಿ, ಅಧಿಕಾರ ನೀಡಲಾಗಿದೆ ಎಂದು ಅವರು ತಿಳಿಸಿದರು.

ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ.ಮಹಿಳೆಯರು ಸಾಕ್ಷರರಾಗುವ ಮೂಲಕ ಸಬಲೀಕರಣಗೊಳ್ಳಬೇಕು ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದರು.
ಜಿ.ಪಂ. ಅಧ್ಯಕ್ಷೆ ಅರುಣಾ, ಮೇಯರ್ ಪಾರ್ವತಿ, ಉಪಮೇಯರ್ ಶಶಿಕಲಾ ಮಾತನಾಡಿದರು.ಜಾನಪದ ಕಲಾವಿದೆ ಹರಿಜನ ಪದ್ಮಮ್ಮ, ಸಮಾಜ ಸೇವಕಿ ಸೀತಮ್ಮ, ಹೆರಿಗೆ ತಜ್ಞೆ ಆದೆಮ್ಮ, ರಂಗಭೂಮಿ ಕಲಾವಿದೆ ಎಸ್. ರೇಣುಕಾ, ಅಂಗವಿಕಲ ವಿದ್ಯಾರ್ಥಿನಿ ಎನ್. ಲಕ್ಷ್ಮಿದೇವಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಎಸ್. ಮುತ್ತಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮೇಟಿ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೆ.ಸಿ. ಬಸವರಾಜ್ ವಂದಿಸಿದರು,

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.