ಬಳ್ಳಾರಿ: ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಬಂಧಿತ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರ ಆಪ್ತರಾಗಿದ್ದ ಶ್ರೀನಿವಾಸ್ ಎಂಬುವವರ ಮನೆಯ ಮೇಲೆ ಶನಿವಾರ ದಾಳಿ ನಡೆಸಿ, ಪರಿಶೀಲಿಸಿದೆ.

ಸ್ಥಳೀಯ ಬಸವೇಶ್ವರ ನಗರದಲ್ಲಿರುವ ಶ್ರೀನಿವಾಸ್ ಅವರ ನಿವಾಸಕ್ಕೆ ಮಧ್ಯಾಹ್ನ ತೆರಳಿದ ಸಿಬಿಐ ಸಿಬ್ಬಂದಿ, ಸಂಜೆಯವರೆಗೂ ಅಲ್ಲಿಯೇ ಇದ್ದು, ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡರು ಎಂದು ಮೂಲಗಳು ಹೇಳಿವೆ.
ಸದ್ಯ ಬಳ್ಳಾರಿಯಲ್ಲೇ ಬೀಡುಬಿ
ಟ್ಟಿರುವ ಸಿಬಿಐ ಸಿಬ್ಬಂದಿ ತನಿಖೆಯನ್ನು ತೀವ್ರಗೊಳಿಸಿದ್ದು, ಬಂಧಿತ ಜನಾರ್ದನರೆಡ್ಡಿ ಹಾಗೂ ಬಿ.ವಿ. ಶ್ರೀನಿವಾಸರೆಡ್ಡಿ ಅವರ ನಿಕಟವರ್ತಿಗಳ ಚಲನವಲನಗಳ ಮೇಲೆ ನಿಗಾ ಇರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.