ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಡ್‌ಕ್ರಾಸ್‌ ಸೇವೆ ಅನನ್ಯ: ಜಿಲ್ಲಾಧಿಕಾರಿ ಬಣ್ಣನೆ

Last Updated 8 ಮೇ 2019, 15:15 IST
ಅಕ್ಷರ ಗಾತ್ರ

ಶಿವಮೊಗ್ಗ:ಅಪಘಾತ, ಯುದ್ಧ ಮೊದಲಾದ ತುರ್ತು ಸನ್ನಿವೇಶಗಳಲ್ಲಿ ರೆಡ್‌ಕ್ರಾಸ್‌ ನೀಡುವ ಸೇವೆ ಅನನ್ಯ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಬಣ್ಣಿಸಿದರು.

ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ನಗರದ ಆರ್‌ಟಿಒ ಕಚೇರಿ ರಸ್ತೆಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ನಡೆದ ರೆಡ್‌ಕ್ರಾಸ್‌ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀನ್ ಹೆನ್ರಿ ಡುನಾಂಟ್ ಅವರು ಸ್ಥಾಪಿಸಿದ ಈ ಸಂಸ್ಥೆ ಜಗತ್ತಿನಲ್ಲೇ ಹೆಸರಾಗಿದೆ. ಮೂರು ಬಾರಿ ನೊಬೆಲ್‌ ಪ್ರಶಸ್ತಿ ಪಡೆದಿದೆ. ರಕ್ತದ ಮಹತ್ವವನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಲ್ಲದೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮಾನವೀಯ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ. ರಕ್ತದಾನದ ಮಹತ್ವವನ್ನು ಜಗತ್ತಿಗೆ ಪರಿಚಯಿಸಿದೆ ಎಂದು ಬಣ್ಣಿಸಿದರು.

ನಂತರ ರೆಡ್‌ಕ್ರಾಸ್‌ ಸಂಜೀವಿನಿ ರಕ್ತನಿಧಿ ಕೇಂದ್ರದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 35 ಜನರು ರಕ್ತದಾನ ಮಾಡಿದರು.

ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಪಿ.ದಿನೇಶ್, ಕಾರ್ಯದರ್ಶಿ ಡಾ.ಎಸ್.ದಿನೇಶ್, ಎನ್‌ಇಎಸ್ ಸಂಸ್ಥೆಯ ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT