ಅಟಾರ್ನಿ ಜನರಲ್‌ ವಜಾ

7

ಅಟಾರ್ನಿ ಜನರಲ್‌ ವಜಾ

Published:
Updated:
Deccan Herald

ವಾಷಿಂಗ್ಟನ್‌: ಅಮೆರಿಕದ ಅಟಾರ್ನಿ ಜನರಲ್‌ ಜೆಫ್‌ ಸೆಷನ್ಸ್‌ ಅವರನ್ನು ವಜಾಗೊಳಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶ ಹೊರಡಿಸಿದ್ದಾರೆ.

ಈ ಮೂಲಕ 2016ರ ಅಧ್ಯಕ್ಷೀಯ ಚುನಾವಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದ ತನಿಖೆಯ ನಿಯಂತ್ರಣವನ್ನು ತಾವೇ ತೆಗೆದುಕೊಂಡಿದ್ದಾರೆ.

ತನಿಖೆಯ ಉಸ್ತುವಾರಿಗೆ ಸಂಬಂಧಿಸಿದಂತೆ ಸೆಷನ್ಸ್‌ ಅವರನ್ನು ಟ್ರಂಪ್‌ ಬಹಿರಂಗವಾಗಿಯೇ ಟೀಕಿಸಿದ್ದರು. ಸೆಷನ್ಸ್‌ ಅವರ ಸ್ಥಾನಕ್ಕೆ ಮ್ಯಾಥೂ ವೈಟಾಕರ್‌ ಅವರನ್ನು ನೇಮಿಸಲಾಗಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

**

ಸಂಪುಟದಲ್ಲಿ ಬದಲಾವಣೆ

ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇಂಗಿತ ವ್ಯಕ್ತಪಡಿಸಿದ್ದಾರೆ.

ಶ್ವೇತ ಭವನದ ಆಡಳಿತದಲ್ಲೂ ಕೆಲವರನ್ನು ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಸರಹ್‌ ಸ್ಯಾಂಡರ್ಸ್‌ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !