ಮಂಗಳವಾರ, ನವೆಂಬರ್ 19, 2019
29 °C
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ನಾಗಾಂಬಿಕಾ ದೇವಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಚೆಕ್ ಹಸ್ತಾಂತರ

ಪರಿಹಾರ ನಿಧಿಗೆ ದೇಣಿಗೆ ಸಲ್ಲಿಕೆ

Published:
Updated:
Prajavani

ಚಿಕ್ಕಬಳ್ಳಾಪುರ: ನೆರೆ ಸಂತ್ರಸ್ತರ ನೆರವಿಗಾಗಿ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ಸಂಗ್ರಹಿಸಿದ್ದ ₹50.76 ಲಕ್ಷ ದೇಣಿಗೆ ಮೊತ್ತದ ಚೆಕ್ ಅನ್ನು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ನಾಗಾಂಬಿಕಾ ದೇವಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಚೆಕ್‌ ಅನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಸಲ್ಲಿಸಿದರು.

ಆ.15 ರಂದು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಅವರವರ ಪಟ್ಟಣ, ನಗರಸಭೆ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಚರಿಸಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಜಿಲ್ಲಾಡಳಿತ ಮನವಿ ಮಾಡಿತ್ತು.

ಎರಡು ದಿನ ದೇಣಿಗೆ ಸಂಗ್ರಹಿಸಿದ ಪೆಟ್ಟಿಗೆಗಳನ್ನು ಆ.17 ರಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ ಮತ್ತು ಸಿಇಒ ಅವರ ಸಮ್ಮುಖದಲ್ಲಿ ತೆರೆದು ಏಣಿಕೆ ಮಾಡಲಾಗಿತ್ತು.

ದೇಣಿಗೆ ಸಂಗ್ರಹದಿಂದ ಒಟ್ಟು ₹32.56 ಲಕ್ಷ ಸಂಗ್ರಹವಾಗಿತ್ತು. ಜತೆಗೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಸ್ವಂತ ಸಂಪನ್ಮೂಲಗಳಿಂದ ಚೆಕ್, ಡಿಡಿಗಳ ಮೂಲಕ ₹18.2 ಲಕ್ಷ ದೇಣಿಗೆ ಸೇರಿಸಲಾಗಿತ್ತು.

ಪ್ರತಿಕ್ರಿಯಿಸಿ (+)