ಬರ ಅಧ್ಯಯನ: ಬಿಎಸ್‌ವೈ ತಂಡ ಭೇಟಿ ನಾಳೆ

7

ಬರ ಅಧ್ಯಯನ: ಬಿಎಸ್‌ವೈ ತಂಡ ಭೇಟಿ ನಾಳೆ

Published:
Updated:

ಚಾಮರಾಜನಗರ: ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬರ ಅಧ್ಯಯನ ತಂಡ ಮಂಗಳವಾರ (ಜ.22) ಜಿಲ್ಲೆಗೆ ಭೇಟಿ ನೀಡಲಿದೆ.

ತಂಡವು  ಬೆಳಿಗ್ಗೆ 11.30ಕ್ಕೆ ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಬಗ್ಗೆ ಮಾಹಿತಿ ಕಲೆ ಹಾಕಲಿದೆ. 

ಆ ಬಳಿಕ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಬಿಜೆಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಸ್‌.ನಾಗೇಂದ್ರ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !